September 25, 2026
The Public Spot
ರಾಜ್ಯ

ತಮಿಳುನಾಡಿಗೆ ನೀರು ಹರಿಸಿದ್ರೆ ಹುಷಾರ್‌.. ಸರ್ಕಾರಕ್ಕೆ ಅನ್ನದಾತರ ಎಚ್ಚರಿಕೆ..

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ. ನಾವು ಕಾನೂನು ಹೋರಾಟ ಮಾಡುತ್ತೇವೆ ಅಂತ ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ಬೇಡಿಕೆಯನ್ನ ನಾವು 2 ಬಾರಿ ತಿರಸ್ಕರಿದ್ದೇವೆ. ಮತ್ತೆ ಕಾವೇರಿ ನೀರು ಬಿಡಿ ಎಂದು ಕೇಳುತ್ತಿದ್ದಾರೆ. ಮೇಲ್ಮನವಿ ಸಲ್ಲಿಸಲು ನಾವು ತೀರ್ಮಾನ ಮಾಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಸೂಚನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಚಾಮರಾಜನಗರದಲ್ಲಿ ರೈತ ಸಂಘ ಪ್ರತಿಭಟನೆ ಮಾಡಿದೆ. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಸ್ತೆ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ ಜಲನಯನ ಪ್ರದೇಶದಲ್ಲಿ ಬರ ತಾಂಡವಾಡುತ್ತಿದೆ. ಇಂತಹ ಸಂದರ್ಭದಲ್ಲಿ CWRC ಸೂಚನೆ ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ತಕ್ಷಣ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು, ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಇನ್ನು CWRC ವಿರುದ್ಧ ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ತಮಿಳುನಾಡಿಗೆ ನೀರು ಬಿಡಬಾರದೆಂದು ನಗರದ ಭುವನೇಶ್ವರಿ ವೃತ್ತದಲ್ಲಿ ಖಾಲಿ‌ ಬಿಂದಿಗೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ರೈತರಿಂದಲೂ ಪ್ರತಿಭಟನೆ ನಡೆದಿದೆ. CWRC ಸೂಚನೆ ವಿರೋಧಿಸಿ ಕಾಡಾ ಕಚೇರಿಯಿಂದ ಮಹಾನಗರ ಪಾಲಿಕೆವರೆಗೆ ರೈತರು ಪ್ರತಿಭಟನೆ ಮಾಡಿದ್ದಾರೆ.. ರಸ್ತೆಯಲ್ಲಿ ಮಲಗಿ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಲವಂತವಾಗಿ ರೈತರನ್ನು ಪೊಲೀಸರು ಎಳೆದುಕೊಂಡು ಹೋದ ಘಟನೆ ನಡೆದಿದೆ.

ಮಂಡ್ಯದಲ್ಲೂ ಕಾವೇರಿ ಕಿಚ್ಚು ಜೋರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಒತ್ತಾಯಿಸಿ ಸಂಜಯ್ ವೃತ್ತದಲ್ಲಿ ಕನ್ನಡ ರಕ್ಷಣಾ ವೇದಿಕೆಯಿಂದ ಬೃಹತ್ ಹೋರಾಟ ನಡೆದಿದೆ. ತಲೆಯ ಮೇಲೆ ಕಲ್ಲು ಹೊತ್ತು, ಖಾಲಿ ಕೊಡ ಹಿಡಿದು, ಒಣಗಿದ ಕಬ್ಬು ಹಿಡಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಣಗೋಯ್ತು ಒಣಗೋಯ್ತು ಕಬ್ಬು ಎಲ್ಲಾ ಒಣಗೋಯ್ತು ಎಂದು ಘೋಷಣೆ ಕೂಗಿ ಸಿಟ್ಟು ಹೊರಹಾಕಿದ್ದಾರೆ.

CWRC ಸೂಚನೆ ವಿರುದ್ಧ ಶುಕ್ರವಾರ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಮಂಡ್ಯದಲ್ಲಿ ಬಿ.ವೈ ವಿಜಯೇಂದ್ರ ಹಾಗೂ ಆರ್ ಅಶೋಕ್ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಸೂಚನೆ ಖಂಡಿಸಿ ಕರವೇ ಪ್ರತಿಭಟನೆ ಮಾಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಕರವೇ ಶಿವರಾಮೇಗೌಡ ಬಣದ ನೂರಾರು ಕಾರ್ಯಕರ್ತರು ಭಾರೀ ಪ್ರತಿಭಟನೆ ಮಾಡಿದ್ದಾರೆ. ತಮಿಳುನಾಡಿಗೆ ನೀರು ಹರಿಸಿದ್ರೆ ಕರ್ನಾಟಕ ಬಂದ್ ಮಾಡ್ತೀವಿ ಅಂತ ಎಚ್ಚರಿಕೆ ನೀಡಿದ್ದಾರೆ.

CWRC ಆದೇಶ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರವೇ ನಾರಾಯಾಣಗೌಡ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ನೂರಾರು ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. 4 ಟಿಂಎಂಸಿ ನೀರನ್ನು ನಾವು ಬಿಡೋದಕ್ಕೆ ಆಗಲ್ಲ. ಬೆಂಗಳೂರಿಗೆ ತಿಂಗಳಿಗೆ 3 ಟಿಎಂಸಿಯಷ್ಟು ನೀರು ಬೇಕು. ಮೇಲ್ಮನವಿ ಸಲ್ಲಿಸಿ ರಾಜ್ಯ ಸರ್ಕಾರ ಕರ್ನಾಟಕದ ರೈತರ ಹಿತ ಕಾಪಾಡಬೇಕೆಂದು ಕರವೇ ನಾರಾಯಾಣಗೌಡ ಹೇಳಿದ್ದಾರೆ.

Related posts

Caste Censes; ಇಂದಿನಿಂದ ಶುರುವಾಗುತ್ತದೆ ಜಾತಿ ಜನಗಣತಿ..! ನಿಮ್ಮ ಧರ್ಮ, ಜಾತಿ ಗೊಂದಲ ಬೇಡ..

Publicspot

ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ

admin

ಹಿರಿಯ ಕಾರ್ಮಿಕ ಹೋರಾಟಗಾರ ಅನಂತ್‌ ಸುಬ್ಬರಾವ್‌ ಇನ್ನಿಲ್ಲ.. ದೇಹವೂ ದಾನ..

Publicspot

ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ ಇತ್ತು. ಇದರಿಂದ ಜನರಿಗೆ ಆರೋಗ್ಯದ ತೊಂದರೆ

admin

ಕಾಂಗ್ರೆಸ್ ಶಾಸಕ H.Y ಮೇಟಿ ನಿಧನರಾಗಿದ್ದು, ಬಾಗಲಕೋಟೆಯಲ್ಲಿ ಅಂತಿಮ ವಿಧಿವಿಧಾನ..

Publicspot

T.B DAM GATE JAM : 6 ಗೇಟ್​ಗಳು ಕೆಲಸ ಮಾಡ್ತಿಲ್ಲ, ಮುರಿದು ಹೋಗುವ ಭೀತಿ..

Publicspot