The Public Spot
ಟ್ರೆಂಡ್

ದೀಪಾವಳಿ ಪಟಾಕಿ ಸಿಡಿಸಲು ಸಮಯ ನಿಗದಿ.. ಪಾಲನೆ ಆಗುತ್ತಾ..?

ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ್ದಾರೆ. ಪೊಲೀಸರ ಮಾರ್ಗಸೂಚಿ ಅನ್ವಯ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವಂತೆಯೂ ಪೊಲೀಸ್ರು ಮನವಿ ಮಾಡಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದ್ದು, ನಿಗದಿತ ಸಮಯ ಮೀರಿ ಪಟಾಕಿ ಸಿಡಿಸಿದರೆ ಕಾನೂನು ಕ್ರಮದ ಎಚ್ಚರಿಕೆ ಕೊಡಲಾಗಿದೆ. ಆಸ್ಪತ್ರೆ, ಪೆಟ್ರೋಲ್ ಬಂಕ್, ಗ್ಯಾಸ್ ಸ್ಟೇಷನ್ ಬಳಿ ಪಟಾಕಿ ಸಿಡಿಸುವಂತಿಲ್ಲ. ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮ ಹಾಗೂ ಮಕ್ಕಳ ಆರೈಕೆ ಕೇಂದ್ರಗಳ ಬಳಿಯೂ ಪಟಾಕಿ ಸಿಡಿಸುವುದನ್ನು ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಜನನಿಬಿಡ ಪ್ರದೇಶ, ಮುಖ್ಯ ರಸ್ತೆಗಳು ಹಾಗೂ ವಾಹನ ಪಾರ್ಕಿಂಗ್ ಸ್ಥಳಗಳಲ್ಲಿ ಪಟಾಕಿ ಸಿಡಿಸದಂತೆ ಸೂಚನೆ ಕೊಟ್ಟಿದ್ದು, ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿಂದ ಮಾತ್ರ ಪಟಾಕಿ ಖರೀದಿಸಬೇಕು. ಪಟಾಕಿ ಖರೀದಿಸುವ ಮುನ್ನ ಪ್ಯಾಕೆಟ್ ಮೇಲಿನ QR ಕೋಡ್ ಸ್ಕ್ಯಾನ್ ಮಾಡಿ ಪರಿಶೀಲಿಸಲು ಪೊಲೀಸರು ಸೂಚನೆ ಕೊಟ್ಟಿದ್ದಾರೆ. ಅಕ್ರಮವಾಗಿ ಪಟಾಕಿ ಮಾರಾಟ ಮಾಡುವ ಅಂಗಡಿಗಳ ಬಗ್ಗೆ ಮಾಹಿತಿ ಇದ್ದರೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಹೆಚ್ಚು ಶಬ್ದ ಹಾಗೂ ವಾಯುಮಾಲಿನ್ಯ ಉಂಟು ಮಾಡುವ ನಿಷೇಧಿತ ಪಟಾಕಿ ಖರೀದಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದು, ಮಕ್ಕಳು ಪಟಾಕಿ ಸಿಡಿಸುವಾಗ ಪೋಷಕರು ಕಡ್ಡಾಯವಾಗಿ ಮಕ್ಕಳ ಜೊತೆಯಲ್ಲಿರಬೇಕು. ಕೈಗವಸು, ಸುರಕ್ಷತಾ ಕನ್ನಡಕ ಧರಿಸುವಂತೆ ಹಾಗೂ ನೀರು, ಮರಳು, ಅಗ್ನಿಶಾಮಕ ಉಪಕರಣಗಳನ್ನು ಹತ್ತಿರದಲ್ಲಿ ಇಟ್ಟುಕೊಳ್ಳಲು ಸೂಚನೆ ಕೊಡಲಾಗಿದೆ.

ಪಟಾಕಿ ಸಿಡಿಸುವಾಗ ಅವಘಡ ಸಂಭವಿಸಿದರೆ ತಕ್ಷಣ 112 ಅಥವಾ 108ಕ್ಕೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ಬಿಎನ್ಎಸ್ ಹಾಗೂ ಸ್ಫೋಟಕ ಕಾಯ್ದೆ ಹಾಗೂ ಮಾಲಿನ್ಯ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದಾರೆ. ದೀಪಾವಳಿ ಸಂಭ್ರಮದ ಜೊತೆಗೆ ಸುರಕ್ಷತೆಗೂ ಆದ್ಯತೆ ನೀಡಿ ಎಂದು ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ. ಇಲ್ಲದಿದ್ರೆ ಕೇಸ್‌ ಹಾಕುವುದಾಗಿಯೂ ಹೇಳಿದ್ದಾರೆ. ಆದರೆ ಪಾಲಿಸ್ತಾರಾ..? ಅನ್ನೋದೇ ಅನುಮಾನ..

Related posts

ನಾಡಿನ ಸಮಸ್ತ ಜನರಿಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು

Publicspot

ನಾಡಿನಾದ್ಯಂತ ನವರಾತ್ರಿ ಸಡಗರ.. ಸರ್ಕಾರದಿಂದ ಸಖತ್​ ಸೌಲಭ್ಯ..

Publicspot

ಎಲೆಕ್ಟ್ರಿಕ್‌ ವಾಹನ ಬಗ್ಗೆ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ದೂರು.. ಕುಮಾರಣ್ಣ ಏನಂತಾರೆ..?

Publicspot

Mysore Dassara: ಈ ಬಾರಿ ದಸರಾ ಉದ್ಘಾಟನೆ ಮಾಡೋದು ಬೂಕರ್​ ಪುರಸ್ಕೃತೆ..! ಅನ್ಯಾಯ ಅಲ್ಲವೇ..?

Publicspot

Sugarcane Farmers Protest; ಸರ್ಕಾರದ ಆಹ್ವಾನ ತಿರಸ್ಕರಿಸಿದ ರೈತರು.. ಸಂಜೆ ತನಕ ಡೆಡ್‌ಲೈನ್‌..

Publicspot

Farmers Fight; ಸಕ್ಕರೆ ಕಾರ್ಖಾನೆ ಮಾಲೀಕರು ಡ್ರಾಮಾ ಮಾಡಿದ್ರೆ ರೈತರು ಬುದ್ಧಿ ಕಲಿಸ್ತಾರೆ..!

Publicspot