The Public Spot
ರಾಜ್ಯ

RAIN EFFECT, SCHOOL CLOSED; ಭಾರೀ ಮಳೆ.. ಎಲ್ಲೆಲ್ಲಿ ಶಾಲೆಗಳಿಗೆ ರಜೆ ಘೋಷಣೆ..?

ರಾಜ್ಯಾದ್ಯಂತ ಮಳೆಯ ಪ್ರಮಾಣ ದ್ವಿಗುಣ ಆಗಿದೆ. ಉತ್ತರ ಕರ್ನಾಟಕ ಭಾಗವೂ ಸೇರಿದಂತೆ ಮಲೆನಾಡು, ಕರಾವಳಿ, ಬಯಲು ಹಳೇ ಮೈಸೂರು ಭಾಗದಲ್ಲೂ ವರುಣ ಅಬ್ಬರಿಸುತ್ತಿದ್ದಾನೆ. ಭಾಗಲಕೋಟೆ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಘಟಪ್ರಭಾ ನದಿಯಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಬೆಳಗಾವಿ ಭಾಗದ ಜಲಾಶಯಗಳಿಂದ ಘಟಪ್ರಭಾ ನದಿಗೆ ಹೆಚ್ಚಿನ ನೀರು ಸೇರುತ್ತಿದ್ದು, ಹಿಡಕಲ್ ಜಲಾಶಯ ಸೇರಿದಂತೆ ವಿವಿಧ ಜಲಾಶಯಗಳಿಂದ 51,185 ಕ್ಯೂಸೆಕ್ ನದಿಗೆ ಬಿಡಲಾಗಿದೆ. ಮುಧೋಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಸ್ಥಳೀಯ ಆಡಳಿತದಿಂದ ಡಂಗೂರ ಸಾರಿಸಲಾಗಿದೆ. ನಗರಸಭೆಯಿಂದಲೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಡಂಗೂರ ಸಾರಿಸಿದ್ದು, ಜನ, ಜಾನುವಾರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ಕೊಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರುಯುತ್ತಿರುವ ಹಿನ್ನಲೆಯಲ್ಲಿ ಇವತ್ತು ಶಾಲಾ ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 6 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಮುಂಡಗೋಡ, ದಾಂಡೇಲಿ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನುಳಿದ ತಾಲೂಕುಗಳಲ್ಲಿ ರಜೆ ಇರುವುದಿಲ್ಲ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯಾ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಹಾವೇರಿ ಡಿಸಿ ವಿಜಯ ಮಹಾಂತೇಶ್ ದಾನಮ್ಮನವರ್ ರಜೆ ನೀಡಿ ಆದೇಶ ಮಾಡಿದ್ದಾರೆ. ಇಂದು ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಇದೇ ಆದೇಶ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೂ ಅದೇಶ ಅನ್ವಯ ಎಂದಿದ್ದಾರೆ.

ಕೊಡಗು, ಕೇರಳ ಭಾಗದಲ್ಲೂ ಭಾರೀ ಮಳೆ ಆಗ್ತಿರೋದ್ರಿಂದ ಕೆಆರ್‌ಎಸ್‌, ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳ ಹರಿವು ಬರುತ್ತಿದ್ದು, ಒಂದು ಲಕ್ಷಕ್ಕೂ ಅಧಿಕ ನೀರನ್ನು ನದಿಗೆ ಬಿಡುಗಡೆ ಮಾಡಲಾಗ್ತಿದೆ. ಹೀಗಾಗಿ ತಿ.ನರಸೀಪುರ ತಾಲೂಕಿನ ಹೆಮ್ಮಿಗೆ ಸೇತುವೆ ಮುಳುಗುವ ಭೀತಿ ಶುರುವಾಗಿದೆ. ಒಂದು ವೇಳೆ ಹೆಮ್ಮಿಗೆ ಸೇತುವೆ ಮುಳುಗಡೆ ಆದ್ರೆ ತಲಕಾಡು – ಟಿ‌.ನರಸೀಪುರ ಸಂಪರ್ಕ ಕಡಿತ ಅಗುವ ಆತಂಕ ಎದುರಾಗಿದೆ. ಸೇತುವೆ ಮುಳುಗಡೆಗೆ ಇನ್ನೂ ಕೇವಲ 1 ಅಡಿ ಅಷ್ಟೆ ಬಾಕಿಯಿದೆ. ಸೇತುವೆಯ ಎರಡು ಕಡೆಯೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಬೀದರ್ ಜಿಲ್ಲೆಯಾದ್ಯಂತ ಮಹಾಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಮಳೆ ಜೋರಾಗಿ ಸುರಿಯುತ್ತಿರೋದ್ರಿಂದ ಕಾರಂಜಾ ಡ್ಯಾಂ ಬಹುತೇಕ ಭರ್ತಿಯಾಗಿದೆ. ಮಹಾರಾಷ್ಟ್ರದ ಧನೆಗಾಂವ್ ಜಲಾಶಯದಿಂದಲೂ ನದಿಗೆ ನೀರು ಬಿಡುಗುಡೆ ಮಾಡಿರೋದ್ರಿಂದ ಭಾಲ್ಕಿ ತಾಲೂಕಿನ ಲಖಣಗಾಂವ್ ಬಳಿಯ ಸೇತುವೆ ಮುಳುಗಡೆ ಆಗಿದೆ. ಇದ್ರಿಂದ ಮಾಂಜ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಜಲಾವೃತವಾಗಿದ್ದು, ಸಂಚಾರ ಸ್ಥಗಿತವಾಗಿದೆ.. ಸ್ಥಳಕ್ಕೆ ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜನ-ಜಾನುವಾರುಗಳು ನದಿ, ಸೇತುವೆ ಹತ್ತಿರ ಬಿಡದಂತೆ ಸೂಚನೆ ನೀಡಿದ್ದಾರೆ.

Related posts

ಆಲಿಕಲ್ಲು ಮಳೆ.. ಇವತ್ತೂ ನಾಳೆ ಬರುತ್ತೆ.. ಸಿಡಿಲಿಗೆ ಸಿಗಲೇಬೇಡಿ..

Publicspot

SSLC ಫಲಿತಾಂಶ ಪ್ರಕಟ ಮತ್ತಷ್ಟು ವಿಳಂಬ.. ಹಠಕ್ಕೆ ಬಿದ್ದ ಸರ್ಕಾರ..

Publicspot

ರಾಜ್ಯದಲ್ಲಿ ಬೇಸಿಗೆ ಮಳೆ.. ಸಿಡಿಲಬ್ಬರಕ್ಕೆ ಜೀವ ಬಲಿ, ಮರ, ವಿಂಡ್‌ ಫ್ಯಾನ್‌‌ ಭಸ್ಮ..

Publicspot

RSS Ban War; ಕರ್ನಾಟಕದ ನೆಲದಲ್ಲೇ ನಿಂತು ಸರ್ಕಾರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..

Publicspot

PUC ಫಲಿತಾಂಶ ನಾಳೆ ಪ್ರಕಟ.. ಶಿಕ್ಷಣ ಸಚಿವರ ಪ್ರಚಾರಕ್ಕೆ ತಡವಾಯ್ತು..

Publicspot

ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ.. ಅಧಿವೇಶನದಲ್ಲಿ ಚರ್ಚೆ.. 4 ದಿನದಲ್ಲಿ ವರದಿ..

Publicspot