The Public Spot
ರಾಜ್ಯ

RSS ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾ..? ಬಿಜೆಪಿ ಕೆಂಡಾಮಂಡಲ ಆಗ್ತಿರೋದ್ಯಾಕೆ..?

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಳೆದ ವಿಧಾನಮಂಡಲ ಅಧಿವೇಶನ ವೇಳೆ ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದಾಗ ಬಿಜೆಪಿ ನಾಯಕು ಸಂಭ್ರಮಿಸಿದ್ರು. ಇದೀಗ ಅದೇ ಕಾಂಗ್ರೆಸ್​ ಸರ್ಕಾರದಲ್ಲಿ ಮಂತ್ರಿ ಆಗಿರುವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ಗೆ ನಿರ್ಬಂಧ ಹಾಕಿ ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ಕೇಸರಿ ಪಕ್ಷದ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಕೂಡ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂಬರಹದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿರುವುದು ಬಿಜೆಪಿ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ಆರ್​ಎಸ್​ಎಸ್​ ಶತಮಾನೋತ್ಸವದ ಪಥಸಂಚಲನ ಕಾರ್ಯಕ್ರಮ.

RSS ಶತಮಾನೋತ್ಸವದ ಸಂಭ್ರಮದಲ್ಲಿ ಬಿಜೆಪಿ ನಾಯಕರೂ ಸೇರಿದಂತೆ RSS ಗಣವೇಷಧಾರಿಗಳಾ ಪಥಸಂಚಲನ ನಡೆಸಿದ್ದರು. ಬೀದಿ ಬೀದಿಗಳಲ್ಲಿ ಗಣವೇಷಧಾರಿಗಳು ಪಥಸಂಚಲನ ನಡೆಸುತ್ತ ದೇಶಭಕ್ತಿಯನ್ನು ಮೆರೆಯುವಾಗಲೇ ಆರ್‌‌ಎಸ್‌‌ಎಸ್‌ ಅಬ್ಬರಕ್ಕೆ ಅಂಕುಶ ಹಾಕಬೇಕು ಎಂದು ಪುಟ್ಟ ಮನವಿ ಜೊತೆಗೆ ಪ್ರಿಯಾಂಕ್​ ಖರ್ಗೆ ಪತ್ರ ರವಾನೆ ಮಾಡಿದ್ದರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ಸರ್ಕಾರಕ್ಕೆ ಸೇರಿದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರ ಯಾವುದೇ ಕಾರ್ಯಕ್ರಮ ನಡೆಸದಂತೆ ನಿಷೇಧ ಹೇರಬೇಕು ಎಂದು ಆಗ್ರಹಿಸಿದ್ದರು.

ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು RSS ಶಾಖೆ ನಡೆಸುತ್ತಾ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತ ಐಕ್ಯತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕರಾತ್ಮಕ ಆಲೋಚನೆ ತುಂಬಲಾಗುತ್ತಿದೆ. ಪೊಲೀಸರ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ದ ಮಕ್ಕಳು ಹಾಗೂ ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಮನವಿ ಮಾಡಿದ್ದರು.

ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದು ಎಂಟು ದಿನಗಳ ಹಿಂದೆ. ಅಕ್ಟೋಬರ್‌ 4ರಂದೇ ಇಂತಹ ಆಲೋಚನೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಕಳುಹಿಸಿದ್ದರು. ಪ್ರಿಯಾಂಕ್‌ ಖರ್ಗೆ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಒಂದು ನೋಟ್​ ಬರೆದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನಿಸಿದ್ದರು. ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಜರುಗಿಸುವುದು ಎಂದು ಸಿಎಂ ಸಿದ್ದರಾಮಯ್ಯ ಬರೆದಿದ್ದರು. ಆದರೆ RSS ಪಥಸಂಚನ ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆದಿದೆ. ಕೆಲವು ಕಡೆ ಪೊಲೀಸರೇ ಭದ್ರತೆ ಒದಗಿಸಿದ್ದಾರೆ. ಆದರೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದ ಬಳಿಕವೂ ಈ ಪತ್ರ ವೈರಲ್​ ಆಗಿದೆ. ಪ್ರಿಯಾಂಕ್​ ಖರ್ಗೆ ಬರೆದ ಪತ್ರ ಹಾಗೂ ಸಿಎಂ ಬರೆದಿದ್ದ ಹಿಂಬರಹ ಎಲ್ಲರ ವಾಟ್ಸಪ್​ ಗ್ರೂಪ್​ಗಳಲ್ಲಿ ಹರಿದಾಡಿದ ಬಳಿಕ ವಾಕ್ಸಮರಕ್ಕೆ ಕಾರಣವಾಗಿದೆ.

ಇಂದಿರಾಗಾಂಧಿ ರೀತಿಯ ಸರ್ವಾಧಿಕಾರದ ವರ್ತನೆಯನ್ನು ಕಾಂಗ್ರೆಸ್‌ನವರು ಈಗ ಮಾಡಬೇಡಿ. ಇಂದಿರಾಗಾಂಧಿ ಕೈಯಲ್ಲೇ ಆಗದಿರೋದನ್ನು ಈಗ ನಿಮ್ಮಿಂದ ಮಾಡಲು ಸಾಧ್ಯವೆ..? ಎಂದು ಕೇಸರಿ ಪಡೆ ಆಕ್ರೋಶ ಹೊರಹಾಕಿದೆ. ಆರ್‌ಎಸ್‌ಎಸ್‌ಗೆ ನಿರ್ಬಂಧ ಹೇರುವ ಚಿಂತನೆಯ ಬಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಒಂದು ವಿಶೇಷ ಸಮಿತಿ ರಚಿಸಲಾಗಿದೆ. ಎಂಎಲ್‌ಸಿ ರವಿಕುಮಾರ್ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿ ರಚನೆ ಮಾಡಲಾಗಿದೆ. ಕಾಂಗ್ರೆಸ್‌ ಸರ್ಕಾರ ಒಂದು ವೇಳೆ ಆರ್‌ಎಸ್‌ಎಸ್‌ ಕಾರ್ಯಕ್ರಮಗಳಿಗೆ ಸರ್ಕಾರಿ ಸ್ಥಳಗಳಲ್ಲಿ ನಿರ್ಬಂಧ ವಿಧಿಸಿದರೆ ಮುಂದೆ ಎದುರಾಗಲಿರುವ ಪರಿಣಾಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ. ಆದರೆ ಈ ಪತ್ರ ಬರೆದಿದ್ದ ಉದ್ದೇಶವೇ ಆರ್‌ಎಸ್‌ಎಸ್‌ ಪಥಸಂಚಲನ ಗುರಿಯಾಗಿಸಿ, ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದರೆ ಸರ್ಕಾರಕ್ಕೆ ಆ ಉದ್ದೇಶವೂ ಇಲ್ಲ. ಆಗಿದ್ದರೂ ವಾಕ್ಸಮರಕ್ಕೆ ಕಾರಣವಾಗಿದ್ದು ಮಾತ್ರ ವಿಪರ್ಯಾಸ.

Related posts

Namma Metro ಹಳದಿ ಮಾರ್ಗದಲ್ಲಿ ಮಹಾನ್​ ಎಡವಟ್ಟು.. ಜನರೆಲ್ಲಾ ಕಂಗಾಲು..

Publicspot

Stone pelting; ರೈತರ ಶಾಲು ಹಾಕಿ ಬಂದವರೆಲ್ಲಾ ರೈತರು ಆಗಲ್ಲ.. ಬೆಳಗಾವಿ ಎಸ್​ಪಿ ಸ್ಪಷ್ಟನೆ..

Publicspot

ಕೇರಳಂ ವಿಚಾರ ಅಂದ್ರೆ ಕಾಂಗ್ರೆಸ್​ ತಲೆ ಮೇಲೆ ಹೊತ್ತು ಮಾಡೋದ್ಯಾಕೆ..?

Publicspot

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

admin

ಜಾತಿ ಜನಗಣತಿ ಆರಂಭ.. ಇವತ್ತು ಹೈಕೋರ್ಟ್‌ನಲ್ಲಿ ಸಿಗುತ್ತಾ ಮಧ್ಯಂತರ ತಡೆ..?

Publicspot

ಒಳ ಮೀಸಲಾತಿ ನಡುವೆ ಸುಪ್ರೀಂನಲ್ಲಿ ಆದಾಯ ಆಧಾರಿತ ಮೀಸಲಾತಿ ಸದ್ದು..!

ಯಶವಂತಿ