The Public Spot
ರಾಜ್ಯ

Farmers Suicide; ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ.. ಒಂದೇ ದಿನ ಇಬ್ಬರು ಸಾವು.. ಆಕ್ರೋಶ

ಮಂಡ್ಯ ಜಿಲ್ಲೆ ಕೆ.ಆರ್​ ಪೇಟೆ ಮೂಲಕ ರೈತ ಮಂಜೇಗೌಡ, ಅರಣ್ಯ ಇಲಾಖೆ ಅಧಿಕಾರಿಗಳು ಟಾರ್ಚರ್​ ನೀಡ್ತಿದ್ದಾರೆ ಅನ್ನೋ ಕಾರಣಕ್ಕೆ ಮಂಡ್ಯ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿತ್ತು. ಆದರೆ ಹೆಚ್ಚು ಸುಟ್ಟಗಾಯಗಳಿಂದ ಬಂದಿದ್ದ ರೈತ ಮಂಜೇಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೆ‌‌.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ, ಜಮೀನು ವಾಜ್ಯದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಸ್ಪಂದಿಸಿದ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಯತ್ನ ಮಾಡಿದ್ದರು. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಭಾಧೆಯಿಂದ ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದಲ್ಲಿ 2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಸಾಲಗಾರರ ಕಾಟ, sಆಲ ತೀರಿಸಲು ಸಾಧ್ಯವಾಗದೆ ಬೇಸತ್ತು ವಿಷ ಸೇವನೆ ಮಾಡಿದ್ದರು. ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಗದಗದಲ್ಲಿ ಬೆಳೆಹಾನಿ ಪರಿಹಾರ ಬಾರದಕ್ಕೆ ರೈತ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಕೊಣ್ಣೂರ ಗ್ರಾಮದ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ವಿಷ ಸೇವನೆ ಮಾಡಿದ ಬಳಿಕ ಅದರ ಸಂಕಟ ತಾಳದೆ ಕಚೇರಿಯಲ್ಲಿ ರೈತ ಬಿದ್ದು ನರಳಾಡಿದ್ದಾನೆ. ನರಗುಂದ ತಾಲೂಕಿನ ಬೆಳ್ಳೇರಿ ಗ್ರಾಮದ ರೈತರ ಸಿದ್ದನಗೌಡ ಹಿರೇಗೌಡ್ರು ಆತ್ಮಹತ್ಯೆಗೆ ಯತ್ನಿಸಿದ್ದು, ಗ್ರಾಮ ಲೆಕ್ಕಾಧಿಕಾರಿ ನಿರ್ಲಕ್ಷದಿಂದ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕು ಎಕರೆ ಜಮೀನಿನಲ್ಲಿ ಗೋವಿನ ಜೋಳ, ಈರುಳ್ಳಿ ಬೆಳೆದಿದ್ದರು. ಆದರೆ ಮಳೆ ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ಬೆಳೆಹಾನಿ ಆಗಿತ್ತು. ಆದರೆ ಬೆಳೆ ಹಾನಿ ಆದರೂ ಪರಿಹಾರದ ಪಟ್ಟಿಯಲ್ಲಿ ಎಂಟ್ರಿ ಮಾಡದ ಕಾರಣಕ್ಕೆ ನಾಡಕಚೇರಿ ಮುಂದೆ ವಿಷ ಸೇವಿಸಿದ್ದಾರೆ.

ಮಂಡ್ಯದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದೆ. ಕಳೆದ‌ 2 ವರ್ಷದಲ್ಲಿ 2000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೇಲೆ ರೈತರಿಗೆ ವಿಶ್ವಾಸ ಕುಂದಿದೆ. ರೈತ ಪರವಾದ ಯಾವುದೇ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಮಾಡ್ತಿಲ್ಲ. ಮಂಡ್ಯದಲ್ಲಿ ಮಂಜೇಗೌಡ ಎಂಬ ರೈತ ಡಿಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿಗೆ ನೇರ ಕಾರಣ ಕಾಂಗ್ರೆಸ್ ಸರ್ಕಾರ ಎಂದಿರುವ ಅಶೋಕ್​, ಇನ್ನೆಷ್ಟು ಸಾವು ನೋಡಲು ಅಧಿಕಾರದಲ್ಲಿ ಕುಳಿತಿರುತ್ತೀರಾ..? ಎಂದು ಪ್ರಶ್ನಿಸಿದ್ದಾರೆ.

ರೈತರ ಆತ್ಮಹತ್ಯೆ ಬಹಳ ದುಃಖಕರ ಸಂಗತಿ, ನೋವಿನ ಸಂಗತಿ. 11ಲಕ್ಷ ಸಾಲ ಮಾಡಿದ್ದರು, ಮನೆಯಲ್ಲಿದ್ದ ಎಲ್ಲಾ ಒಡವೆ 4.5 ಲಕ್ಷಕ್ಕೆ ಅಡವಿಟ್ಟಿದ್ರು. ಬಗರ್ ಹುಕುಂ ಸಾಗುವಳಿಯಲ್ಲಿ 15-16 ವರ್ಷದಿಂದ ಉಳುಮೆ ಮಾಡ್ತಿದ್ದಾರೆ. ಅರಣ್ಯ ಇಲಾಖೆಯವರು ಈಗ ತಕರಾರು ಮಾಡಿದ್ದಾರೆ. ಅರ್ಜಿ‌ ಕೊಟ್ಟರು ಯಾವುದೇ ಸ್ಪಂದನೆ ಇಲ್ಲ. ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಕಬ್ಬು ಬೆಳೆಗಾರರು ಪ್ರತಿಭಟನೆ ಮಾಡ್ತಿದ್ದರು ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಚಾಮರಾಜ ನಗರದಲ್ಲಿ ಕೆರೆಗಳನ್ನು ತುಂಬಿಸಿ ಎರಡು ವರ್ಷಗಳು ಕಳೆದಿದೆ. ಮಾನವ ಮೃಗಗಳ‌ ಸಂಘರ್ಷ ನಡೆಯತ್ತಿದೆ. ಅರಣ್ಯದ ಅಂಚಿನ ಗ್ರಾಮಗಳಿಗೆ ಸೌಲಭ್ಯಗಳನ್ನು ಕೊಡಬೇಕು. ಅಧಿಕಾರಿಗಳು, ಮಂತ್ರಿಗಳು ಜನರಿಗೆ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

Related posts

ಲಂಕೇಶ್ ಅವರನ್ನು ರೂಪಿಸಿದ್ದು ಅವರ ಬಹುರೂಪಿ ಓದು. ತನ್ನ ಕಾಲಮಾನದ ಎಲ್ಲಾ ವಯೋಮಾನದವರ ಬರವಣಿಗೆ

admin

ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ

admin

ಹಾಸನಾಂಬೆ ದರ್ಶನಕ್ಕೆ ಹೋಗುವ ಮುನ್ನ ಹುಷಾರು.. ಜನಸಂಖ್ಯೆ ನಿಯಂತ್ರಣಕ್ಕೆ ಪರದಾಟ..!

Publicspot

ಅಪರೂಪದ ಸಮಾಗಮ, ಅಚ್ಚರಿಯ ಬೆಳವಣಿಗೆಗೆ ಕಾರಣವಾದ ಮೋದಿ..!

ಯಶವಂತಿ

ಜಾತಿ ಜನಗಣತಿ ಆರಂಭ.. ಇವತ್ತು ಹೈಕೋರ್ಟ್‌ನಲ್ಲಿ ಸಿಗುತ್ತಾ ಮಧ್ಯಂತರ ತಡೆ..?

Publicspot

No Rain Only Flood; ಉತ್ತರ ಕರ್ನಾಟಕದಲ್ಲಿ ಮಳೆಯಿಲ್ಲ.. ಪ್ರವಾಹ ಮಾತ್ರ.. ಕಾರಣ ನಮ್ಮದೇ ಸರ್ಕಾರ..!!

Publicspot