The Public Spot
ರಾಜ್ಯ

ಹೊಸ ವರ್ಷ 2026ರ ಸ್ವಾಗತಕ್ಕೆ ಹೇಗಿದೆ ಬೆಂಗಳೂರು ಖಾಕಿ ತಯಾರಿ..?

ಹೊಸ ವರ್ಷದ ಸಂಭ್ರಮಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಸೆಲಬ್ರೇಷನ್ ಹಾಟ್ ಸ್ಪಾಟ್ ಆಗಿರೋ ಬೆಂಗಳೂರಿನ ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರೋಡ್ ಬಿಗಿ ಭದ್ರತಾ ಮಾಡಿಕೊಳ್ಳಲಾಗಿದೆ. ಸೆಲಬ್ರೇಷನ್ ವೇಳೆ ಯಾರೂ ನೋಡಲ್ಲ ಅಂತಾ ಬಾಲ ಬಿಚ್ಚಿದ್ರೆ ನಿಮ್ಮ ಮೇಲೆ ನಿಗಾ ಇಟ್ಟಿರುತ್ತವೆ ಸಿಸಿಟಿವಿಗಳು. 3500ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದೆ. ಖಾಸಗಿ ಮತ್ತು ಪೊಲೀಸ್ ಇಲಾಖೆ ಮೂಲಕ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆಯುವ ಸಂಭ್ರಮಾಚರಣೆಯ ಪ್ರತಿಯೊಂದು ಕ್ಷಣವನ್ನು ಕಂಟ್ರೋಲ್ ರೂಮ್​ನಲ್ಲಿ ಕುಳಿತು ವೀಕ್ಷಣೆ ಮಾಡಲಾಗುತ್ತದೆ. ಪ್ರತಿ 50 ಮೀಟರ್​ಗೆ ಒಂದರಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಎಂಜಿ ರೋಡ್​ನಲ್ಲಿ ಹೊಸ ವರ್ಷ ಸ್ವಾಗತಕ್ಕೆ ರಸ್ತೆಗೆ ಬ್ಯಾರಿಕೇಡ್ ಹಾಕಿ ಪೊಲೀಸರು ತಯಾರಿ ಮಾಡಿಕೊಂಡಿದ್ದು, ಪೊಲೀಸ್ ಡಾಗ್ ಸ್ಕ್ವಾಡ್ ಕೂಡ ಪರಿಶೀಲನೆ ನಡೆಸಿದೆ. ರಸ್ತೆಯುದ್ದಕ್ಕೂ ಹೆಚ್ಚುವರಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ವಾಚ್ ಟವರ್ಸ್ ಕೂಡ ನಿರ್ಮಾಣ ಮಾಡಲಾಗಿದೆ.

ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚು ಸಿಸಿಟಿವಿಗಳನ್ನ ಅಳವಡಿಸಿರೋ ಪೊಲೀಸರು ಎಲ್ಲಾ ರೀತಿಯಲ್ಲೂ ಯಾವುದೇ ಲೋಪದೋಷ ಆಗದಂತೆ ಕಟ್ಟೆಚ್ಚರ ವಹಿಸಲು ನಿರ್ಧರಿಸಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಬಾರಿ ಎಂಜಿ ರಸ್ತೆ ಒಂದರಲ್ಲೇ 3 ಲಕ್ಷಕ್ಕೂ ಹೆಚ್ಚು ಜನರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

ನ್ಯೂ ಇಯರ್ ಸೆಲೆಬ್ರೇಷನ್​ಗೆ ಕೋರಮಂಗಲ ಕೂಡ ಸಜ್ಜಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೋರಮಂಗಲದಲ್ಲಿ ಅತೀ ಹೆಚ್ಚು ಪಬ್ ಇರುವ ಕಾರಣಕ್ಕೆ ಹೆಚ್ಚಾಗಿ ಯುವಕ ಯುವತಿಯರೇ ಹೆಚ್ಚಾಗಿ ಬರ್ತಾರೆ. ಕೋರಮಂಗಲ ರಸ್ತೆಯಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ವ್ಯವಸ್ಥೆ ನೋಡಿಕೊಳ್ಳಲು LED ಅಳವಡಿಕೆ ಮಾಡಲಾಗಿದೆ.

20 ವಾಚ್ ಟವರ್, 180 ಫೋಕಸ್ ಲೈಟ್, 9 ಆಕ್ಸೆಸ್ ಕಂಟ್ರೋಲ್,6 ವೆಹಿಕಲ್ ಚೆಕಿಂಗ್ ಪಾಯಿಂಟ್, 8 KSRP ಕಾರ್ ವೆಹಿಕಲ್, 250 ಸಿಸಿಟಿವಿ, 15 ಸೇಫ್ಟಿ ಶೆಲ್ಟರ್, 5 ಆ್ಯಂಬುಲೆನ್ಸ್, 2 ಫೈಯರ್ ವೆಹಿಕಲ್, 1 ನೆರವು ಕೇಂದ್ರ, 2 SOS ಪಾಯಿಂಟ್​, 5 ಡ್ರೋಣ್​, 5 ಚೀತಾ ಪೊಲೀಸ್ ಬೈಕ್, 5 ಹೊಯ್ಸಳ ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟಾರೆ ಬೆಂಗಳೂರು ಹೊಸ ವರ್ಷ 2026 ಸ್ವಾಗತಕ್ಕೆ ಸಿದ್ಧವಾಗಿದೆ.

Related posts

ಲಂಕೇಶ್ ಅವರನ್ನು ರೂಪಿಸಿದ್ದು ಅವರ ಬಹುರೂಪಿ ಓದು. ತನ್ನ ಕಾಲಮಾನದ ಎಲ್ಲಾ ವಯೋಮಾನದವರ ಬರವಣಿಗೆ

admin

Farmers Suicide; ರಾಜ್ಯದಲ್ಲಿ ಅನ್ನದಾತರ ಆತ್ಮಹತ್ಯೆ.. ಒಂದೇ ದಿನ ಇಬ್ಬರು ಸಾವು.. ಆಕ್ರೋಶ

Publicspot

ಹೈಕೋರ್ಟ್‌ ಆದೇಶಕ್ಕೆ ಮಣಿದ ಸರ್ಕಾರ.. ನಾಳೆಯೇ SSLC ರಿಸಲ್ಟ್‌

Publicspot

ರಾಜ್ಯಕ್ಕೆ ಮುಂಗಾರು ಪ್ರವೇಶ.. ಎಲ್ಲೆಲ್ಲಿ ಮಳೆ ಆಗ್ತಿದೆ ಗೊತ್ತಾ..?

Publicspot

HEAVY RAIN ALERT: ರಾಜ್ಯದಲ್ಲಿ ಮಳೆ ಆರ್ಭಟ.. 5 ಜಿಲ್ಲೆಗೆ ರೆಡ್ ಅಲರ್ಟ್‌

Publicspot

ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ 1 ಎಂದ ಸಿಎಂ ಸಿದ್ದರಾಮಯ್ಯ

admin