September 20, 2026
The Public Spot
ರಾಜ್ಯ

ಆಲಿಕಲ್ಲು ಮಳೆ.. ಇವತ್ತೂ ನಾಳೆ ಬರುತ್ತೆ.. ಸಿಡಿಲಿಗೆ ಸಿಗಲೇಬೇಡಿ..

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಜಿಟಿ ಜಿಟಿ ಮಳೆಯಲ್ಲಿ ಮನೆಗೆ ಹೋಗಲು ಜನರು ಪರದಾಡುವಂತಾಗಿತ್ತು. ಕಾರ್ಪೋರೇಷನ್, ಮಲ್ಲೇಶ್ವರ, ರಾಜಾಜಿನಗರ ಸೇರಿ ಹಲವು ಏರಿಯಾಗಳಲ್ಲಿ ಮಳೆ ಸುರಿದಿದೆ. ಕೆಲವು ಅಂಡರ್ ಪಾಸ್ ಬಳಿ ಅಲ್ಪ ಪ್ರಮಾಣದ ನೀರು ಶೇಖರಣೆ ಆಗಿದ್ರಿಂದ ಕೆಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಷ್ಟೇ ಅಲ್ಲದೆ ಆಲಿಕಲ್ಲು ಮಳೆಯಾಗಿದ್ರಿಂದ ಬೈಕ್‌ ಸವಾರರು ಸಂಚಾರ ಮಾಡುವುದಕ್ಕೂ ಅಡ್ಡಿಯಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಎರಡನೇ ದಿನವೂ ವರುಣನ ಆರ್ಭಟ ಮುಂದುವರಿದಿದೆ. ಗುಡುಗು ಸಹಿತ ಭಾರೀ ಮಳೆಗೆ ದೇವನಹಳ್ಳಿ ಜನತೆ ತತ್ತರಿಸಿದ್ದಾರೆ. ಯುಗಾದಿ ಹಬ್ಬಕ್ಕೆ ಶಾಪಿಂಗ್ ಮಾಡಲು ಬಂದವರು ಅಂಗಡಿಗಳಲ್ಲೇ ಲಾಕ್ ಆಗಿದ್ದರು. ಮಳೆಯಿಂದಾಗಿ ವಾಹನ ಸವಾರರು ಸಂಚಾರ ಮಾಡಲಾಗದೆ ಹೈರಾಣದ್ರು.. ಕೆಲ ಸಮಯ ಜನಜೀವನ ಅಸ್ತವ್ಯಸ್ತ ಆಗಿತ್ತು. ಮೋರಿಗಳು ತುಂಬಿ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿತ್ತು. ಸುಮಾರು ಎರಡು ಗಂಟೆಗಳ ಕಾಲ ಮಳೆರಾಯನ ಆರ್ಭಟಿಸಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಆಲಿಕಲ್ಲು ಮಳೆಯಾಗಿದೆ. ಜಿಲ್ಲೆಯಾದ್ಯಂತ ಸುಮಾರು ಅರ್ಧ ಗಂಟೆಗಳ ಕಾಲ ಆಲಿಕಲ್ಲು ಮಳೆ ಸುರಿದಿದೆ. ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿದನೂರು ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆ ಸುರಿದಿದೆ. ಬಿರುಗಾಳಿ ಸಮೇತ ಆಲಿಕಲ್ಲು ಮಳೆ ಸುರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವಿವಿಧೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಮಳೆ ಸುರಿಯುವಾಗ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಬೇಲೂರು ತಾಲ್ಲೂಕಿನ ಅರೇಹಳ್ಳಿ ಬಸ್ ನಿಲ್ದಾಣದ ಬಳಿ ತೆಂಗಿನ ಮರಕ್ಕೆ ಸಿಡಿಲು ಹೊಡೆದಿದ್ದು, ಜನರು ನೋಡ ನೋಡುತ್ತಲೇ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಈ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಮರ ಹೊತ್ತಿ ಉರಿದಿದೆ.

ಯಾದಗಿರಿಯಲ್ಲಿ‌ ಧಾರಾಕಾರ ಮಳೆ ಸುರಿದಿದ್ದು, ಮಳೆ ಸುರಿಯುವಾಗ ಸಿಡಿಲು ಬಡಿದು ರೈತ ಸಾಹಿದ್ದ ಎತ್ತು ಸಾವನ್ನಪ್ಪಿದೆ. ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಘಟನೆ ನಡೆದಿದೆ.. ರೈತ ಕಾಶಪ್ಪ ಸುಂಕರ್ ಎಂಬುವವರ ಎತ್ತು ಸಾವನ್ನಪ್ಪಿದೆ. ಸಿಡಿಲಿನ ಹೊಡೆತಕ್ಕೆ ಎತ್ತು ಸ್ಥಳದಲ್ಲೇ ಸಾವನ್ನಪ್ಪಿದೆ. ಸಾವಿರಾರು ರೂಪಾಯಿ ಕೊಟ್ಟು ತಂದಿದ್ದ ಎತ್ತು ಸಾವನ್ನಪ್ಪಿದ್ದರಿಂದ ರೈತ ಕಣ್ಣೀರು ಹಾಕಿದ್ದಾರೆ. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಈ ವೇಳೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ರೈತ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಇನ್ನೆರೆಡು ದಿನಗಳ ಕಾಲ ಮಳೆ ಮುಂದುವರಿಕೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ನಾಳೆ ನಾಡಿದ್ದು ರಾಜ್ಯದ 23 ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿ‌ನ ಎರಡು ದಿನಗಳ ಅವಧಿಯಲ್ಲಿ ಬಿರುಗಾಳಿ ಸಿಡಿಲು ಗುಡುಗು ಸಹಿತ ಆಲಿಕಲ್ಲು ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಿಡಿಲು ಬಡಿಯುವ ಸಾಧ್ಯತೆಗಳು ಇರುವುದರಿಂದ ಜನರು ಎಚ್ಚರಿಕೆ ವಹಿಸುವ ಅಗತ್ಯವಿದೆ.

Related posts

ಶಿಕ್ಷಕರ ನೇಮಕಾತಿ & ಕಡ್ಡಾಯ ನಿಯಮಗಳು.. BE, BSc, BCA ಗೂ ಚಾನ್ಸ್​​

Publicspot

ಸತ್ತ ಗಂಡನ ಜೊತೆಗೆ 10 ದಿನಗಳನ್ನು ಕಳೆದಳು ಪತ್ನಿ..!

Publicspot

ಮೀಸಲಾತಿ ಮಸೂದೆಗೆ ಅಂಕಿತ.. ಆದರೂ ಹಳೇ ಮೀಸಲಾತಿಯಲ್ಲಿ ನೇಮಕಾತಿ ಯಾಕೆ..?

Publicspot

Lingayath and Veershaiva are not same; ವೀರಶೈವಾ – ಲಿಂಗಾಯತ ಎರಡೂ ಬೇರೆ ಬೇರೆ.. ಮಾತೆ ಗಂಗಾದೇವಿ..

Publicspot

17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

admin

ಬೆಳೆ ಹಾನಿ ಬಗ್ಗೆ ಪರಿಶೀಲನೆಗೆ ನಾನೇ ಖುದ್ದು ಹೋಗ್ತೀನಿ.. ನೋಡ್ತೀನಿ.. ಗೌಡ್ರು..

Publicspot