The Public Spot
ರಾಜ್ಯ

SSLC ಫಲಿತಾಂಶ ಪ್ರಕಟ ಮತ್ತಷ್ಟು ವಿಳಂಬ.. ಹಠಕ್ಕೆ ಬಿದ್ದ ಸರ್ಕಾರ..

ರಾಜ್ಯದಲ್ಲಿ ಈಗಾಗಲೇ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಕ್ತಾಯವಾಗಿ 15 ದಿನಗಳು ಕಳೆದಿವೆ. ಈಗಾಗಲೇ ಶಿಕ್ಷಕರೂ ಕೂಡ ಮೌಲ್ಯಮಾಪನ ಮುಗಿಸಿ ಜನಗಣತಿಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಫಲಿತಾಂಶ ಮಾತ್ರ ನಿಗದಿಯಂತೆ ಏಪ್ರಿಲ್​ 24ರಂದು ಪ್ರಕಟ ಆಗುವುದು ಅನುಮಾನ ಎನ್ನಲಾಗ್ತಿದೆ. ಇದಕ್ಕೆ ಪ್ರಮುಖ ಕಾರಣ ರಾಜ್ಯ ಸರ್ಕಾರದ ಹಠಮಾರಿತನ ಧೋರಣೆ.

ರಾಜ್ಯ ಸರ್ಕಾರ ಪರೀಕ್ಷೆ ನಡೆಯುತ್ತಿರುವಾಗ ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಅಂಕವನ್ನು ಫಲಿತಾಂಶಕ್ಕೆ ಸೇರಿಸಿಕೊಳ್ಳದೆ ಕೇವಲ A,B,C,D ಎಂದು ಗ್ರೇಡ್​ ನೀಡುವ ನಿರ್ಧಾರ ಮಾಡಿತ್ತು. ಆ ನಿರ್ಧಾರವನ್ನು SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್​, ಈ ಬಾರಿ ಹಿಂದಿ ಸೇರಿದಂತೆ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದೀಗ ಸರ್ಕಾರ ಮೇಲ್ಮನವಿ ಸಲ್ಲಿಕೆ ಮಾಡಿದೆ.

ಹಿಂದಿ ಸೇರಿದಂತೆ ತೃತೀಯ ಭಾಷೆಯಲ್ಲಿ ಗ್ರೇಡ್ ಬದಲು ಅಂಕಗಳನ್ನು ನೀಡುವ ವಿಚಾರವಾಗಿ ಹೈಕೋರ್ಟ್​ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿರುವ ರಾಜ್ಯ ಸರ್ಕಾರ, ಶೀಘ್ರವಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದೆ. ಹಲವು ಪ್ರಮುಖ ವಿಚಾರಗಳನ್ನು ಉಲ್ಲೇಖಿಸಿ ಮರು ಪರಿಶೀಲನೆ ಮಾಡಲು ಹೈಕೋರ್ಟ್​ಗೆ​ ಸರ್ಕಾರ ಮನವಿ ಮಾಡಿದೆ. SSLC ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ಎಲ್ಲಾ ತೃತೀಯ ಭಾಷೆ ಹಾಗೂ NSQF ವಿಷಯಗಳಿಗೆ ಅರ್ಜಿ ವಿಚಾರಣೆ ತುರ್ತಾಗಿ ನಡೆಸುವಂತೆ ಸರ್ಕಾರ ಮನವಿ ಮಾಡಿದೆ.

ಗ್ರೇಡ್ ನೀಡಿರುವ ಶಿಕ್ಷಣ ಇಲಾಖೆಯ ಉದ್ದೇಶವನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ನಡುವೆ ಸಮಾನ ಅವಕಾಶ ಕಲ್ಪಿಸಲು, ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲು ತೃತೀಯ ಭಾಷೆ ಮತ್ತು ಎನ್‌ಎಸ್‌ಕ್ಯೂಎಫ್ ವಿಷಯಗಳಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ಉದ್ದೇಶಿಸಲಾಗಿದೆ. ಅಂಕದ ಬದಲು ಗ್ರೇಡ್ ನೀಡುವುದು ಸುಧಾರಣಾ ಕ್ರಮವಾಗಿದ್ದು, ಇದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಎಂದು ಕೋರ್ಟ್​ಗೆ ಮನವರಿಕೆ ಮಾಡಿಕೊಡಲು ನಿರ್ಧರಿಸಿದೆ.

ಸರ್ಕಾರದ ನಡೆಯಿಂದ ತೃತೀಯ ಭಾಷೆ ತಿರಸ್ಕಾರಕ್ಕೆ ಒಳಗಾಗುತ್ತದೆ ಎಂಬ ವಾದದಲ್ಲಿ ಹುರುಳಿಲ್ಲ ಎಂದಿರುವ ರಾಜ್ಯ ಸರ್ಕಾರ, ಈಗಾಗಲೇ ನೀಡಿರುವ ಏಕಸದಸ್ಯ ಪೀಠದ ಆದೇಶವನ್ನು ಮರು ಪರಿಶೀಲನೆ ಮಾಡಬೇಕು ಎಂದು ಅರ್ಜಿ ಸಲ್ಲಿಕೆ ಮಾಡಿದೆ. ಹೈಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆದು, ಆ ಬಳಿಕ ಫಲಿತಾಂಶ ಪ್ರಕಟವಾಗುವುದು ತಡವಾಗುವುದು ನಿಶ್ಚಯ ಆದಂತೆ ಕಾಣ್ತಿದೆ. ಒಂದು ವೇಳೆ ಹೈಕೋರ್ಟ್​ ಆದೇಶ ಏನೇ ಬಂದರೂ ಸುಪ್ರೀಂಕೋರ್ಟ್​ ಮೇಲ್ಮನವಿ ಹೋದರೆ ಮತ್ತಷ್ಟೂ ದಿನಗಳು ಫಲಿತಾಂಶ ವಿಳಂಬ ಆಗುತ್ತಲೇ ಸಾಗುತ್ತದೆ. ಆದರೆ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದ್ದು, ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಫಲಿತಾಂಶ ಪ್ರಕಟ ಮಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಪದ್ದತಿ ಜಾರಿ ಮಾಡುವುದು ಸೂಕ್ತ ಎನ್ನಬಹುದು.

Related posts

ಕೇರಳಂ ವಿಚಾರ ಅಂದ್ರೆ ಕಾಂಗ್ರೆಸ್​ ತಲೆ ಮೇಲೆ ಹೊತ್ತು ಮಾಡೋದ್ಯಾಕೆ..?

Publicspot

High Court Dismissed PIL ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಇನ್ನಿಲ್ಲ ತಡೆ..

Publicspot

ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ?

admin

Stone pelting; ರೈತರ ಶಾಲು ಹಾಕಿ ಬಂದವರೆಲ್ಲಾ ರೈತರು ಆಗಲ್ಲ.. ಬೆಳಗಾವಿ ಎಸ್​ಪಿ ಸ್ಪಷ್ಟನೆ..

Publicspot

ಬೆಂಗಳೂರಲ್ಲಿ ಒಂದೇ ಒಂದು ದಿನದ ಒಂದು ಗಂಟೆ ಮಳೆಗೆ 10 ಜನರ ಬಲಿ

Publicspot

SC ಕ್ಯಾಸ್ಟ್ ಸೆನ್ಸ್; ದಲಿತರನ್ನು ಕ್ರಿಶ್ಚಿಯನ್ ಮಾಡಲು ಹೊರಟಿದೆ ರಾಜ್ಯ ಸರ್ಕಾರ.. ಬಿಜೆಪಿ ನಿಯೋಗ ಕಿಡಿ..

ಯಶವಂತಿ