The Public Spot
Uncategorizedರಾಜಕೀಯ

ಇಂಧನ ಉಳಿಸುವ ಬಗ್ಗೆ ಬಿಜೆಪಿ ನಾಟಕ.. ಕಾಂಗ್ರೆಸ್ ಕಟು ಟೀಕೆ..

ಇಸ್ರೇಲ್, ಅಮೆರಿಕ ಇರಾನ್‌ ನಡುವೆ ಸಂಘರ್ಷ ಏರ್ಪಟ್ಟ ಬಳಿಕ ಹಾರ್ಮುಜ್ ಜಲಸಂಧಿ ಮುಚ್ಚಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ಮಿತವ್ಯಯಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಮೆಟ್ರೋದಲ್ಲಿ ಸಂಚಾರ ಮಾಡಿದ್ದಾರೆ. ಎಂ.ಜಿ ರಸ್ತೆಯ ಮೆಟ್ರೋ ಸ್ಟೇಷನ್‌ನಿಂದ ಸ್ವಾಮಿ ವಿವೇಕಾನಂದ ಸ್ಟೇಷನ್‌ವರೆಗೆ ಮೆಟ್ರೋ ಮೂಲಕ ಪ್ರಯಾಣ ಮಾಡಿದ್ದಾರೆ. ಕೇಂದ್ರ ಸಚಿವ ಸೋಮಣ್ಣಗೆ ಸಂಸದ ಪಿ.ಸಿ ಮೋಹನ್ ಸಾಥ್ ಕೊಟ್ಟಿದ್ದಾರೆ. ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್‌ನಿಂದ ರೈಲ್ವೇ ನಿಲ್ದಾಣದವರೆಗೂ ಇವಿ ಬೈಕ್‌ನಲ್ಲಿ ಪ್ರಯಾಣ ಮಾಡಿದ್ದಾರೆ. ಇದೇ ರೀತಿ ವಿಜಯೇಂದ್ರ ಕೂಡ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್, ಡೀಸೆಲ್​ ಬಳಕೆ ಮಿತವಾಗಿರಲಿ ಎಂದು ದೇಶದ ಜನರಿಗೆ ಮನವಿ ಕರೆ ನೀಡಿದ ಬಳಿಕ ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಸರ್ಕಾರಿ ವಾಹನ ಬಿಟ್ಟು, ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಜೈಪುರ ರೈಲ್ವೆ ನಿಲ್ದಾಣದಿಂದ ಅಜ್ಮಿರ್​ಗೆ ರೈಲಿನಲ್ಲಿ ತೆರಳಿದ್ದಾರೆ. ಆದರೆ ಇದೊಂದು ತೋರಿಕೆಗಾಗಿ ಮಾಡ್ತಿರೋ ಗಿಮಿಕ್‌ ಎಂದು ಕಾಂಗ್ರೆಸ್‌ ಆರೋಪಿಸಿದೆ. ಬಿಜೆಪಿ ನಾಯಕರ ಮೆಟ್ರೋ ಸಂಚಾರಕ್ಕೆ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದು, ಇದೆಲ್ಲ ಬರೀ ನಾಟಕ. ದಿನ ಮೆಟ್ರೋ ಹತ್ತಿದ್ರೆ ನಾವೂ ಒಪ್ತೀವಿ. ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು. ಪ್ರತಿದಿನ ಬಿಎಂಟಿಸಿ ಬಸ್ ಹತ್ತಲಿ ನೋಡೋಣ. ನಮ್ಮ ಶಕ್ತಿ ಯೋಜನೆಯ ಉಪಯೋಗ ಪಡೆದುಕೊಳ್ಳಲಿ ಎಂದು ಕುಟುಕಿದ್ದಾರೆ.

ಬೆಳಗಾವಿಯಲ್ಲಿ ಸಚಿವ ಸತೀಶ್​​ ಜಾರಕಿಹೊಳಿ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ವಿಚಾರವಾಗಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದ್ದು ಇದೇನು ಹೊಸದಲ್ಲ. ಚುನಾವಣೆ ಮುಗಿದ ಬಳಿಕ ಬೆಲೆ ಏರಿಕೆ ಮಾಡೋದು ಬಿಜೆಪಿಯರದ್ದು ತಂತ್ರಗಾರಿಕೆ. ದರ ಏರಿಕೆಯನ್ನ ಕೇಂದ್ರ ಸರ್ಕಾರ ನಿಯಂತ್ರಣ ಮಾಡಬೇಕು. ಆರು‌ ತಿಂಗಳಿಗೊಮ್ಮೆ ಬೆಲೆ ಏರಿಕೆ ಮಾಡುತ್ತಾರೆ. ಯಥಾಸ್ಥಿತಿಗೆ ತರುವ ಕೆಲಸ ಆಗಬೇಕು. ಕೇಂದ್ರ ಸರ್ಕಾರದ ದರ ಏರಿಕೆ ಬಗ್ಗೆ ಜನ‌ ತೀರ್ಮಾನ ಮಾಡಬೇಕು ಎಂದಿದ್ದಾರೆ.

ಸರ್ಕಾರದ‌ ಮಟ್ಟದಲ್ಲಿ ಬೆಂಗಾಲು ವಾಹನವನ್ನ ಕಡಿತ ಮಾಡೋ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಒಂದು ಬೆಂಗಾಲು ವಾಹನ ತೆಗೆಯೋದು, ಸೈಕಲ್ ಹತ್ತೋದು, ಮೆಟ್ರೋ ಹತ್ತೋದು ಸರಿಯಲ್ಲ. ಮೋದಿ ಅವರು ಸಮಸ್ಯೆಯಿದೆ ಅಂತಾರೆ, ಹರ್ದೀಪ್ ಸಿಂಗ್ ಪುರಿ ಸಮಸ್ಯೆಯಿಲ್ಲ ಅಂತಾರೆ. ನಾವು ಯಾರ ಮಾತನ್ನ ನಂಬಬೇಕು ಹೇಳಿ ಅಂತಾ ಪ್ರಶ್ನಿಸಿದ್ದಾರೆ. ಒಂದು ಕಡೆ LPG ತೊಂದರೆಯಿಲ್ಲ, ಕಚ್ಚಾತೈಲ ತೊಂದರೆಯಿಲ್ಲ ಅಂತಾನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡ್ತಿದ್ದಾರೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related posts

ರೇಣುಕಾಸ್ವಾಮಿ ಕೊಲೆ ಆಧಾರಿತ ಚಿತ್ರ ಅಂತಾ BOSS ಚಿತ್ರ ಬಿಡುಗಡೆಗೆ ಬ್ರೇಕ್‌..

Publicspot

BigBoss Kannada; ಈ ಬಾರಿ ಕನ್ನಡಮಯ ಆಗಿದ್ಯಾಕೆ ಬಿಗ್‌ಬಾಸ್‌..?

Publicspot

Nepal New Leader emerged: ನೇಪಾಳಕ್ಕೆ ನೂತನ ನಾಯಕರು ಯಾರು..? ಏನು ವಿಶೇಷ..?

Publicspot

Karnataka Rathna Dr Vishnuvardhan: ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪುರಸ್ಕಾರ

Publicspot

INTERNAL CASTE RESERVATION: ಕಾಂಗ್ರೆಸ್‌ ಪಾಲಿಗೆ ಕಬ್ಬಿಣದ ಕಡೆಲೆ ಆದ ಒಳಮೀಸಲಾತಿ..

Publicspot

ಕಾಂಗ್ರೆಸ್​ನಲ್ಲಿ ಡಿನ್ನರ್​ ಪಾಲಿ‘ಟ್ರಿಕ್ಸ್​’ ಡಿಕೆಶಿ ಉದ್ದೇಶ ಏನು..? ಸಿಎಂ ಆಗ್ತಾರಾ..?

Publicspot