The Public Spot
ರಾಜ್ಯ

Abhiman Studio: ಅಭಿಮಾನ್​ ಸ್ಟುಡಿಯೋ ವಶಕ್ಕೆ ಪಡೆದ ಸರ್ಕಾರ.. ಮತ್ತೆ ತಲೆ ಎತ್ತುತ್ತಾ ಸ್ಮಾರಕ..?

ಬೆಂಗಳೂರಿನ ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋ ಜಾಗವನ್ನ ಸರ್ಕಾರದ ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ. ಈ ಕುರಿತಂತೆ ಅರಣ್ಯ ಇಲಾಖೆಗೆ ಸರ್ಕಾರ ಪತ್ರ ಬರೆದಿದ್ದು, ಐದು ವರ್ಷಗಳಾದ್ರೂ ಸ್ಟುಡಿಯೋ ನಿರ್ಮಾಣ ಆಗದಿರೋದ್ರಿಂದ ಭೂಮಿಯನ್ನ ವಶಕ್ಕೆ ಪಡೆಯಲು ನಿರ್ಧರಿಸಿದೆ ಎಂದು ತಿಳಿಸಿದೆ.

ಅಭಿಮಾನ್ ಸ್ಟುಡಿಯೋ ಸರ್ಕಾರ ವಶಕ್ಕೆ ಪಡೆಯುವ ವಿಚಾರವಾಗಿ ಬೀದರ್‌ನಲ್ಲಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದು ಅರಣ್ಯ ಭೂಮಿ ಇರುತ್ತೋ ಅದು ಉಳಿಯುತ್ತದೆ. 3 ದಿನದಿಂದ ಜಿಲ್ಲೆಯಲ್ಲೇ ಬೀದರ್‌ನಲ್ಲೇ ಇದ್ದೀನಿ, ಮಾಹಿತಿ ಪಡೆದುಕೊಳ್ತೀನಿ. HMT ಅರಣ್ಯ ಭೂಮಿ ಎನ್ನುವುದು ಯಾರಿಗೆ ಗೊತ್ತಿತ್ತು. ನನ್ನ ಗಮನಕ್ಕೆ ಬಂದ ತಕ್ಷಣ ವಶಕ್ಕೆ ಪಡೆಯಲು ನಿರ್ಧರಿಸಿದ್ದೇವೆ. ವಿಷ್ಣುವರ್ಧನ್ ಅವರ ಬಗ್ಗೆ ನಮಗೆಲ್ಲಾ ಅಭಿಮಾನ ಇದೆ, ಅವರು ಅತ್ಯಂತ ಮೇರುನಟ. ಹೋಗ್ತಾ ಹೋಗ್ತಾ ಏನೇನ್ ಹೊರಗಡೆ ಬರುತ್ತೋ ಅದೆಲ್ಲದರಲ್ಲೂ ಕಾನೂನು ಕ್ರಮ ಕೈಗೊಳ್ಳುತ್ತೇವೆ.

ವಿಷ್ಣುವರ್ಧನ್ ಅವರ ಸ್ಮಾರಕವನ್ನ ಯಾವಾಗ ಮಾಡ್ಬೇಕು..? ಎಲ್ಲಿ ಮಾಡ್ಬೇಕು..? ಎಂಬ ಬಗ್ಗೆ ಸರ್ಕಾರ ತೀರ್ಮಾನಿಸುತ್ತದೆ. ಸ್ಮಾರಕ ನಿರ್ಮಾಣ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ, ನಾನು ಮಾಡುವಂತದ್ದಲ್ಲ. ಪತ್ರ ಬರೆಯೋದು ದಿನನಿತ್ಯದ ಕೆಲಸ, ಅಧಿಕಾರಿಗಳಿಗೆ ಕಾಲಕಾಲಕ್ಕೆ ಏನೇನು ಸೂಚನೆ ಕೊಡ್ಬೇಕು ಕೊಡ್ತೀನಿ. ಲೀಸ್ ಕೊಟ್ಟಿರುವ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ, ಮಾಹಿತಿ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಬೆಂಗಳೂರಲ್ಲಿ ನ‌ಟ ಅನಿರುದ್ಧ ಮಾತನಾಡಿ ಸರ್ಕಾರ ಅಭಿಮಾನ್ ಸ್ಟುಡಿಯೋ ಜಾಗ ವಶಪಡಿಸಿಕೊಳ್ಳಬಹುದು ಅಂತಾ ಮೊದಲೇ ನನಗೆ ಗೊತ್ತಿತ್ತು. ಆ ನಿಟ್ಟಿನಲ್ಲಿ 6 ವರ್ಷದಿಂದ ಪ್ರಯತ್ನ ಪಟ್ಟೆವು ಆಗಿರಲಿಲ್ಲ. ಈಗ ನಮಗೆ ತುಂಬಾ ಖುಷಿ ಕೊಟ್ಟಿದೆ. ಅಪ್ಪಾಜಿ ಅಂತ್ಯ ಸಂಸ್ಕಾರ ಆದ ಜಾಗದಲ್ಲಿ ಭಾರತಿ ಅಮ್ಮ ಸ್ಮಾರಕ ಕಟ್ಟಿದ್ರು. ಅಲ್ಲಿ ಸ್ಮಾರಕ ನೆಲಸಮ ಮಾಡಲಾಗಿತ್ತು. ಅಭಿಮಾನಿಗಳ ಪರವಾಗಿ ಸಿಎಂ ಅವರನ್ನ ಭೇಟಿ ಮಾಡಿ ಮನವಿ ಸಲ್ಲಿಸ್ತೀವಿ ಎಂದಿದ್ದಾರೆ. ಈಗ ಸರ್ಕಾರ ವಶಕ್ಕೆ ತಗೊಂಡಿರೋದು ಖುಷಿ ಕೊಟ್ಟಿದೆ. ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗವನ್ನು ಕೇಳ್ತೇವೆ ಎಂದಿದ್ದಾರೆ.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದನ್ನು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಸರ್ಕಾರದದ ಕ್ರಮವನ್ನ ಮೈಸೂರಿನಲ್ಲಿ ವಿಷ್ಣು ಅಭಿಮಾನಿಗಳು ಸಂತಸದಿಂದ ಸ್ವಾಗತಿಸಿದ್ದಾರೆ. ಮೈಸೂರಿನ ಅಗ್ರಹಾರ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್​ ಭಾವಚಿತ್ರ ಹಿಡಿದು, ಜೈಕಾರ ಕೂಗಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ವಿಷ್ಣುವರ್ಧನ್​ ಪುಣ್ಯಭೂಮಿಯನ್ನು ಸಂರಕ್ಷಿಸಲು ಮುಂದಾಗಿರುವ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದು, ಇದು ಅಭಿಮಾನಿಗಳ 15 ವರ್ಷದ ಹೋರಾಟಕ್ಕೆ ಸಂದ ಜಯ ಎಂದಿದ್ದಾರೆ.

Related posts

Cast Censes Karnataka Highcourt Conditions; ಜಾತಿ ಸಮೀಕ್ಷೆ ಅಲ್ಲ.. ಆರ್ಥಿಕ, ಸಾಮಾಜಿಕ ಸಮೀಕ್ಷೆ.. ವಾದ ಒಪ್ಪಿದ ಹೈಕೋರ್ಟ್‌

Publicspot

Mysore Dassara Supreme Court direction; ದಸರಾ ಸಿದ್ದತೆ ನಡುವೆ ಎಲ್ಲರ ಚಿತ್ತ ಸುಪ್ರೀಂಕೋರ್ಟ್‌ನತ್ತ.. ಬಾನು ಬರ್ತಾರಾ..? ಇಲ್ವಾ..?

Publicspot

ಲಂಕೇಶ್ ಅವರ ಅಧ್ಯಯನಶೀಲತೆ ಮಾದರಿಯಾಗಲಿ: ಪತ್ರಕರ್ತರ ಮಕ್ಕಳಿಗೆ ಕೆವಿ ಪ್ರಭಾಕರ್ ಕರೆ

admin

ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ?

admin

ಹೊಸ ವರ್ಷ 2026ರ ಸ್ವಾಗತಕ್ಕೆ ಹೇಗಿದೆ ಬೆಂಗಳೂರು ಖಾಕಿ ತಯಾರಿ..?

Publicspot

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

admin