The Public Spot
ರಾಜ್ಯ

Mysore Dassara Supreme Court direction; ದಸರಾ ಸಿದ್ದತೆ ನಡುವೆ ಎಲ್ಲರ ಚಿತ್ತ ಸುಪ್ರೀಂಕೋರ್ಟ್‌ನತ್ತ.. ಬಾನು ಬರ್ತಾರಾ..? ಇಲ್ವಾ..?

ಮೈಸೂರು ದಸರಾ ಉದ್ಘಾಟನೆಗೆ ಕೇವಲ 4 ದಿನ ಬಾಕಿಯಿದ್ದು ತಯಾರಿಗಳು ಭರದಿಂದ ಸಾಗುತ್ತಿವೆ. ಸೆಪ್ಟೆಂಬರ್‌ 22ರಂದು ಬಾನು ಮುಸ್ತಾಕ್ ದಸರಾ ಉದ್ಘಾಟನೆ ಮಾಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಈಗಾಗಲೇ ವೇದಿಕೆ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಕೇವಲ ಪಾಸ್ ಉಳ್ಳವರಿಗಷ್ಟೇ ಬೆಟ್ಟಕ್ಕೆ ಪ್ರವೇಶ ಸಿಗಲಿದೆ. ಬೆಟ್ಟದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ಜಿಟಿ ದೇವೇಗೌಡ ಭಾಗಿಯಾಗಲಿದ್ದಾರೆ.

ಯುವ ದಸರಾಗೆ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸೆಪ್ಟೆಂಬರ್‌ 23 ರಿಂದ ಸೆಪ್ಟೆಂಬರ್‌ 27ರ ತನಕ ಯುವ ದಸರಾ ನಡೆಯಲಿದೆ. ಒಟ್ಟು 5 ದಿನಗಳ ಕಾಲ ನಡೆಯಲಿರುವ ಯುವ ದಸರಾ ಕಾರ್ಯಕ್ರಮಕ್ಕೂ ವೇದಿಕೆ ಸಜ್ಜಾಗುತ್ತಿದೆ. ಮೈಸೂರಿನ ರಿಂಗ್ ರೋಡ್ ಹೊರವಲಯದ ಉತ್ತರಹಳ್ಳಿಯಲ್ಲಿ ಯುವ ದಸರಾ ಆಚರಣೆಗೆ ಬೃಹತ್ ವೇದಿಕೆ ನಿರ್ಮಾಣ ಆಗ್ತಿದೆ.

ದಸರಾ ಉದ್ಘಾಟನೆ ದಿನದಿಂದ ಪ್ರತಿ ದಿನವೂ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹೀಗಾಗಿ ಅರಮನೆ ಮುಂಭಾಗ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ನಾಡಹಬ್ಬ ದಸರಾಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಸೆಪ್ಟೆಂಬರ್‌ 22ರ ಸಂಜೆ ಸಿಎಂ ಸಿದ್ದರಾಮಯ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಈ ಬಾರಿ ₹10 ಕೋಟಿ ವೆಚ್ಚದಲ್ಲಿ 136 ಕಿಲೋ ಮೀಟರ್ ವಿದ್ಯುತ್ ದೀಪಾಲಂಕಾರಕ್ಕೆ ನಿರ್ಧಾರ ಮಾಡಲಾಗಿದ್ದು, ವಿದ್ಯುತ್ ದೀಪಾಲಂಕಾರದಿಂದ ಮೈಸೂರು ಜಗಮಗಿಸಲು ಸಿದ್ದವಾಗಿದೆ.

ಈ ನಡುವೆ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿಚಾರವಾಗಿ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗ್ತಿದೆ. ಮೊನ್ನೆಯಷ್ಟೇ ಹೈಕೋರ್ಟ್ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಇದೀಗ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಹೆಚ್.ಎಸ್.ಗೌರವ್ ಎಂಬುವವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ದಸರಾ ಉದ್ಘಾಟನೆಯಲ್ಲಿ ಹಿಂದೂಯೇತರ ವ್ಯಕ್ತಿ ಭಾಗವಹಿಸುವುದರಿಂದ ಯಾವುದೇ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಹೆಚ್.ಎಸ್.ಗೌರವ್ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದು, ಇಂದೆ ಸುಪ್ರೀಂಕೋರ್ಟ್​​​ ವಿಚಾರಣೆ ನಡೆಸಲಿದೆ. ಸುಪ್ರೀಂಕೋರ್ಟ್‌ ಈ ವಿಚಾರದಲ್ಲಿ ಏನು ಹೇಳುತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ.

Related posts

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ S I R ಶುರು.. ಢವಢವ ಶುರು..

Publicspot

ನಾಳೆ, ನಾಡಿದ್ದು CET ಪರೀಕ್ಷೆ.. ಈ ವರ್ಷ ಮಹತ್ವದ ಬದಲಾವಣೆ..

Publicspot

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

admin

ಇಂದು ನಾಳೆ ಭಾರೀ ಮಳೆ ಆಗುವ ಬಗ್ಗೆ ಅಲರ್ಟ್​.. ಬೆಂಗಳೂರಿಗೆ ಸಂಕಷ್ಟ!!

Publicspot

BJP Protest Against Potholes; ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ..

Publicspot

ಕುರುಬರಿಗೆ ಎಸ್ಟಿ ಮೀಸಲಾತಿ ಕೇಂದ್ರ ವಾಪಸ್‌ ಕಳುಹಿಸಿದೆ.. ನಾನು ಮತ್ತೆ ಕಳುಹಿಸುತ್ತೇನೆ..

Publicspot