12ನೇ ತರಗತಿ ಪರೀಕ್ಷೆ ರದ್ದು ಮಾಡಿದ ಕೇಂದ್ರ..!

ಸಿಬಿಎಸ್‌ಸಿ, ಐಸಿಎಸ್‌ಸಿ ಸೇರಿದಂತೆ 12ನೇ ತರಗತಿ ಪರೀಕ್ಷೆ ನಡೆಸಬೇಕಾ ಬೇಡ್ವಾ ಅನ್ನೋ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ವು. ಈ ನಡುವೆ ಇಂದು ಕೇಂದ್ರ ಸರ್ಕಾರ ಎಲ್ಲಾ ಬೋರ್ಡ್ಗಳ ಸಭೆ ಕೂಡ ಮಾಡಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪರೀಕ್ಷೆ ರದ್ದು ಮಾಡುವ ನಿರ್ಣಯ ಕೈಗೊಳ್ಳಲಾಗಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿ ಪರೀಕ್ಷೆ ನಡೆಸುವುದರಿಂದ ಆಗುವ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಯ್ತು. ಚರ್ಚೆಯ ಬಳಿಕ ಅಂತಿಮವಾಗಿ ಸಿಬಿಎಸ್‌ಸಿ , ಐಸಿಎಸ್‌ಸಿ. 12ನೇ ತರಗತಿ ಪರೀಕ್ಷೆ ರದು ಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಯ್ತು. ಬೆಳಿಗ್ಗೆ ನಡೆದ ಬೋರ್ಡ್ ಸಭೆಯಲ್ಲಿ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಕೇಂದ್ರ ಸರ್ಕಾರದ ನಿಲುವಿಗೆ ಸಿಬಿಎಸ್‌ಸಿ ದನಿಗೂಡಿಸಿತ್ತು. ಅಂತಿಮವಾಗಿ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಿದೆ ಕೇಂದ್ರ ಸರ್ಕಾರ.

ಕೊರೊನಾ ಸಮಯದಲ್ಲಿ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರನ್ನು ಸಂಕಷ್ಟಕ್ಕೆ ಸೂಡುವುದಕ್ಕೆ ನಾವು ಸಿದ್ಧರಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳ ಸಭೆಯಲ್ಲಿ ಸ್ಷಷ್ಟ್ಟವಾಗಿ ಹೇಳಿದ್ದಾರೆ. ಕೊರೊನಾ ಸೋಂಕು ಮಾರಕವಾಗಿದ್ದು ನಮ್ಮ ದೇಶದ ಯುವಜನರನ್ನು ಸಂಕಷ್ಟಕ್ಕೆ ಸೂಡಲಾಗುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿಬಿಎಸ್‌ಸಿ, ಐಸಿಎಸ್‌ಸಿ, 12ನೇ ತರಗತಿ ಬೋರ್ಡ್ ಎಕ್ಸಾಂಗಳು ರದ್ದಾಗಿದೆ. ಆದರೆ ಆಬ್ಜೆಕ್ಟೀವ್ ಆಧಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಲಾಗಿದೆ.

ದ್ವಿತೀಯ ಪಿಯು ಪರೀಕ್ಷೆ ಕಥೆ ಏನು..?

ಸಿಬಿಎಸ್‌ಇ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಸ್ವಾಗತಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯಪಠ್ಯ ಕ್ರಮದ ಕುರಿತು ಶೀಘ್ರದಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ. ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ ಹಾಗೂ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ. ಅದರಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತ ಅಡಕವಾಗಿರುತ್ತದೆ ಎಂದಿದ್ದಾರೆ.

Related Posts

Don't Miss it !