ಮಂಗಳವಾರ ಮೈಸೂರಲ್ಲಿ ನಡೆದಿತ್ತು ಸಾಮೂಹಿಕ ಅತ್ಯಾಚಾರ.!

ದೆಹಲಿಯಲ್ಲಿ 2016ರ ಡಿಸೆಂಬರ್​ 16ರಂದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ವಿಚಾರ ಇಡೀ ದೇಶವನ್ನೇ ತಲ್ಲಣಗೊಳ್ಳುವಂತೆ ಮಾಡಿತ್ತು. ವಿಶ್ವಮಟ್ಟದಲ್ಲೂ ನಿರ್ಭಯಾ ಅತ್ಯಾಚಾರ ಪ್ರಕರಣ ದೊಡ್ಡ ಸದ್ದು ಮಾಡಿತ್ತು. ದೂರದ ದೆಹಲಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಕನ್ನಡಿಗರು ಮರುಗಿದ್ದರು. ಆದರೆ ಕರ್ನಾಟಕದಲ್ಲೇ ಇಂತಹ ಭೀಕರ ಕೃತ್ಯ ನಡೆದಿದೆ. ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅದೂ ಕೂಡ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ. ಮಂಗಳವಾರ ರಾತ್ರಿ ವೇಳೆ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವೇಳೆ ನಾಲ್ವರು ದುಷ್ಕೃತ್ಯ ಎಸಗಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅತ್ಯಾಚಾರ ಘಟನೆ ಬೆಳಕಿಗೆ ಬಂದಿದ್ದು ಹೇಗೆ..?

ಮಂಗಳವಾರ ಸಂಜೆ 7 ಗಂಟೆ ಸಮಯದಲ್ಲಿ ಸ್ನೇಹಿತನ ಜೊತೆಗೆ ಹೊರಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್​ನ ಗುಡ್ಡದ ಬಳಿ ಐವರು ಅಪರಿಚಿತರು ಸ್ನೇಹಿತನ ಮೇಲೆ ಹಲ್ಲೆ ಮಾಡಿ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುವ ವೇಳೆ ಸಾಮೂಹಿಕ ಅತ್ಯಾಚಾರ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿ ನೆರೆ ರಾಜ್ಯದವಳಾಗಿದ್ದು, ಓದುವ ಸಲುವಾಗಿ ಮೈಸೂರಿನ ಖೀಆಸಗಿ ಶಿಕ್ಷಣ ಸಂಸ್ಥೆಯೊಂದಕ್ಕೆ ಬಂದಿದ್ದಳು ಎನ್ನಲಾಗಿದೆ. ಯುವತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕಾದುದು ನಮ್ಮ ಕರ್ತವ್ಯ ಕೂಡ ಆಗಿದೆ. ಆದರೆ ಅತ್ಯಾಚಾರಕ್ಕೆ ಒಳಗಾದ ಯುವತಿಗೆ ನ್ಯಾಯ ಕೊಡಿಸಬೇಕಿದೆ.

ಇದನ್ನೂ ಓದಿ;

ಸಾಂಸ್ಕೃತಿಕ ನಗರಕ್ಕೆ ಮಸಿ ಬಳಿಕ ಕಾಮುಕರು..!

ಮೈಸೂರು ನಾಡಹಬ್ಬ ದಸರಾ ಹಾಗೂ ಮೈಸೂರು ಹುಲಿ ಟಿಪ್ಪು ಸುಲ್ತಾನನ ಸಾಧನೆಗಳಿಂದ ದೇಶ ವಿದೇಶದಲ್ಲಿ ಖ್ಯಾತಿ ಪಡೆದಿದೆ. ಆದರೆ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕಾರಣಕ್ಕೆ ಮೈಸೂರಿಗೆ ಕಪ್ಪು ಚುಕ್ಕೆ ಇಟ್ಟಂತಾಗಿದೆ. ಅತ್ಯಾಚಾರ ಮಡಿದ ದುರುಳರು ಕೂಲಿ ಕಾರ್ಮಿಕರಂತೆ ಇದ್ದರು ಎಂದು ವಿದ್ಯಾರ್ಥಿನಿಯ ಸ್ನೇಹಿತ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾನೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ಕೊಡಲಾಗ್ತಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಅತ್ಯಾಚಾರದ ಬಗ್ಗೆ ಮಾತನಾಡಿರುವ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಆಲನಹಳ್ಳಿ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನ ಶೀಘ್ರದಲ್ಲೇ ಬಂಧಿಸುತ್ತೇವೆ ಎಂದಿದ್ದಾರೆ.

ಸಾಮೂಹಿಕ ಅತ್ಯಾಚಾರದ ಬಗ್ಗೆ ಗೃಹ ಸಚಿವರ ಹೇಳಿಕೆ..!

ಮೈಸೂರಿನ ಸಾಮೂಹಿಕ ಅತ್ಯಾಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಎಫ್ಐಆರ್ ಕೂಡ ದಾಖಲಾಗಿದೆ. ಉನ್ನತ ಮಟ್ಟದ ಅಧಿಕಾರಿಗಳು ಮೈಸೂರಿಗೆ ತೆರಳುತ್ತಿದ್ದಾರೆ. ಗುರುವಾರ ನಾನು ಕೂಡ ಮೈಸೂರಿಗೆ ಹೋಗ್ತಿದ್ದೇನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಪೊಲೀಸರಿಗೆ ಸೂಚಿಸಿದ್ದೇನೆ. ಅಧಿಕಾರಿಗಳು ಕ್ಲಿಯರ್ ವರದಿ ಕೊಟ್ಟ ನಂತರ ಸಿಎಂ ಜೊತೆಗೆ ಚರ್ಚಿಸಿ, ಯಾವ ರೀತಿ ಕ್ರಮ ಆಗಬೇಕು ಎಂಬುದನ್ನು ತೀರ್ಮಾನ ಮಾಡುತ್ತೇನೆ. ಮೈಸೂರು ತುಂಬಾ ಶಾಂತವಾಗಿರುವ ಸ್ಥಳ. ಜನ ನೆಮ್ಮದಿಯಿಂದ ಬದುಕುತ್ತಿದ್ದಾರೆ. ಆದರೆ ಇದೊಂದು ಘಟನೆ ಆಗಿದ್ದು ನೋವು ತಂದಿದೆ ಎಂದಿದ್ದಾರೆ.

ಇದನ್ನೂ ಓದಿ;

ಅತ್ಯಾಚಾರ ಆರೋಪಿಗಳ ಪತ್ತೆಗೆ ತನಿಖಾ ತಂಡ ರಚನೆ..!

ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್​, ಸರ್ಕಾರಿ ಅತಿಥಿ ಗೃಹದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ‌.ರಾಮದಾಸ್ ಸೇರಿ ಸ್ಥಳಿಯ ನಾಯಕರು ಭಾಗಿಯಾಗಿದ್ದರು. ಇತ್ತೀಚೆಗೆ ನಗರದಲ್ಲಿ ಕ್ರೈಂ ಹೆಚ್ಚಾದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ, ಎಸ್‌ಪಿ ಆರ್‌.ಚೇತನ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಭೆಯಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ‌ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಯ್ತು. ಬಳಿಕ ಮಾತನಾಡಿದ ಸಚಿವ ಎಸ್​.ಟಿ ಸೋಮಶೇಖರ್​, ಘಟನೆಯ ಎಲ್ಲಾ‌ ವಿವರಗಳನ್ನು ಮುಖ್ಯಮಂತ್ರಿ ಹಾಗೂ ಗೃಹಸಚಿವರ ತಿಳಿಸಿದ್ದೇನೆ. ಮೈಸೂರಿಗೆ ಕಪ್ಪು ಚುಕ್ಕೆ ತರುವಂತ ಘಟನೆ ಮತ್ತೆ ನಡೆಯದಂತೆ ತಡೆಯಲು ಸೂಕ್ತ ಭದ್ರತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.

ಅತ್ಯಾಚಾರ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ, ಬಿಜೆಪಿ ಸಮರ್ಥನೆ..!

ಮೈಸೂರಿನಲ್ಲಿ ನಡೆದಿರುವ ಗ್ಯಾಂಗ್ ರೇಪ್ ಖಂಡಿಸಿ ಮೈಸೂರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯ್ತು. ಜಿಲ್ಲಾ ವಿಧ್ಯಾರ್ಥಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಬಿಜೆಪಿ ಸರ್ಕಾರ ಇರುವ ಕಡೆಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ನೆಲ ಕಚ್ಚಿದೆ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲರಾಗಿದ್ದಾರೆ.ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹ ಮಾಡಿದ್ರು. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಒಂದು, ಎರಡು ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವುದು ಸರಿಯಲ್ಲ. ಆದ್ರೆ ಎಚ್ಚರವಹಿಸಬೇಕಿದೆ ಎಂದಿದ್ದಾರೆ. ಈ ಪ್ರಕರಣ ಸಾಂಸ್ಕೃತಿಕ ನಗರಿಗೆ ಕಪ್ಪು ಚುಕ್ಕೆ ಎಂದಿದ್ದಾರೆ. ಶಾಸಕ ಎಸ್.ಎ.ರಾಮದಾಸ್ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ್ದಾರೆ.

Related Posts

Don't Miss it !