The Public Spot
ಅಪರಾಧ

ED RAID: ಕಾಂಗ್ರೆಸ್​ ಶಾಸಕನ ಮನೆ ಮೇಲೆ ED ರೇಡ್​.. ಸಿಕ್ಕಿಂನಲ್ಲಿ ಲಾಕ್​ ಆದ ವೀರೇಂದ್ರ ಪಪ್ಪಿ..

ಚಿತ್ರದುರ್ಗದ ಕಾಂಗ್ರೆಸ್​ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ( ED ) ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಪಪ್ಪಿ ನಿವಾಸ ಹಾಗೂ ಬೆಂಗಳೂರಿನ ವಸಂತನಗರದಲ್ಲಿರೋ ನಿವಾಸದ ಮೇಲೂ ದಾಳಿ ಮಾಡಿದ್ದು, ನಿನ್ನೆ ಶುಕ್ರವಾರ ಬೆಳಗ್ಗೆಯಿಂದಲೂ ಶೋಧ ಕಾರ್ಯಾಚರಣೆ ನಡೆಯುತ್ತಲೇ ಇದೆ. ಬೆಂಗಳೂರಿನ ವಸಂತನಗರದಲ್ಲಿ ಇರುವ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲೂ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಚಿತ್ರದುರ್ಗ ಸೇರಿದಂತೆ ಒಟ್ಟು 30 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವ್ಯವಹಾರಿಕವಾಗಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಶಂಕೆ ಇದ್ದು, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆನ್​ಲೈನ್​ ಗೇಮ್​ ಆ್ಯಪ್​ಗೂ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವ ಬಗ್ಗೆ ಶೋಧ ನಡೆಸುತ್ತಿದ್ದಾರೆ.

ಬೆಂಗಳೂರಿಂದ ಚಳ್ಳಕೆರೆ ನಿವಾಸಕ್ಕೆ ಕೆಸಿ ನಾಗರಾಜ್ ಆಗಮಿಸಿ ಅಧಿಕಾರಿಗಳ ತನಿಖೆಗೆ ಸಹಕರಿಸಿದ್ದಾರೆ. ಶಾಸಕ ಕೆಸಿ ವೀರೇಂದ್ರ ಪಪ್ಪಿ ಅಣ್ಣ ಕೆ.ಸಿ ನಾಗರಾಜ್, ಇಡಿ ಅಧಿಕಾರಿಗಳ ಸೂಚನೆ ಮೇರೆಗೆ ನಿವಾಸಕ್ಕೆ ಆಗಮಿಸಿದ್ದಾರೆ. ಇನ್ನು ಸಹೋದರಿ ಕೂಡ ಮನೆ ಬಳಿಗೆ ಬಂದು ಒಳಕ್ಕೆ ಹೋಗಲು ಅವಕಾಶ ಸಿಗದೆ ವಾಪಸ್​ ಆಗಿದ್ದಾರೆ. ಶಾಸಕ ವೀರೇಂದ್ರ ನಿವಾಸದಲ್ಲಿ ಸಾಕಷ್ಟು ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದ್ದು, ಸಾಕಷ್ಟು ಆಸ್ತಿ ಪತ್ರಗಳೂ ಪತ್ತೆಯಾಗಿದೆ. ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದ್ದು, ಎಲ್ಲವನ್ನೂ ಸಿಕ್ರೇಟ್ ಲಾಕರ್​ನಲ್ಲಿ ಇರಿಸಿದ್ದರು ಎನ್ನಲಾಗಿದೆ. ದಾಳಿ ವೇಳೆ ಮನೆಯಲ್ಲಿ ವೀರೇಂದ್ರ ಪಪ್ಪಿ ತಾಯಿ ರತ್ನಮ್ಮ ಮಾತ್ರ ಮನೆಯಲ್ಲಿದ್ದರು ಎನ್ನಲಾಗಿದೆ.

ಚಿತ್ರದುರ್ಗ ಶಾಸಕ ಕೆ ಸಿ ವಿರೇಂದ್ರ ಪಪ್ಪಿಗೆ ಸಂಬಂಧಿಸಿದ ಉದ್ಯಮಗಳಾದ Ratna gold, Ratna multi source, Pappi technlogies, Pappi tour & travels, Pappi Bear box ಉದ್ಯಮಗಳಲ್ಲಿ ಅಕ್ರಮ ಹಣ ವ್ಯವಹಾರ ನಡೆದಿದೆ ಅನ್ನೋ ಮಾಹಿತಿ ಲಭಿಸಿದೆ. ECIR ದಾಖಲಿಸಿ ಕರ್ನಾಟಕ ಹಾಗೂ ಗೋವಾದ ಕಚೇರಿ, ನಿವಾಸ ಸೇರಿದಂತೆ ಸಾಕಷ್ಟು ಕಡೆ ದಾಳಿ ನಡೆದಿದೆ. ತಮ್ಮ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಳಿ ಮಾಡಲಾಗಿದೆ ಅನ್ನೋದು ಗೊತ್ತಾಗಿದೆ. ಸಹೋದರ ನಾಗರಾಜ್, ತಿಪ್ಪೇಸ್ವಾಮಿ ಮನೆಯಲ್ಲೂ ನಿರಂತರ ಶೋಧ ನಡೆಯುತ್ತಿದೆ. ಶಾಸಕ ವೀರೇಂದ್ರ ಪಪ್ಪಿ ಸಂಬಂಧಿತ 30 ಕಡೆ ರೇಡ್ ಮಾಡಲಾಗಿದೆ.

ಸಿಕ್ಕಿಂನಲ್ಲಿದ್ದ ಶಾಸಕ ಕೆ ಸಿ ವೀರೇಂದ್ರ ಪಪ್ಪಿಯನ್ನು ವಶಕ್ಕೆ ಪಡೆದಿರುವ ED ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದ್ದು, ಸಿಕ್ಕಿಂನಿಂದ ಬೆಂಗಳೂರಿಗೆ ಕರೆ ತರುವ ಸಾಧ್ಯತೆಯಿದೆ. ಮತ್ತೊಂದು ಕಡೆ ಕುಸುಮಾ ಸಹೋದರ ಅನಿಲ್ ಗೌಡ ಮನೆಯಲ್ಲೂ ಶೋಧ ಮುಂದುವರಿದಿದೆ. ವೀರೇಂದ್ರ ಪಪ್ಪಿ ಮನೆಯಲ್ಲಿದ್ದ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಒಡೆದಿರುವ ಜಾರಿ ನಿರ್ದೇಶನಾಲಯ aಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸಿ, ನಕಲು ಪ್ರತಿ ಪಡೆಯುತ್ತಿದ್ದಾರೆ. ಪೊಲೀಸರ ಭದ್ರತೆಯಲ್ಲಿ ಜೆರಾಕ್ಸ್ ಪ್ರತಿ ತೆಗೆಯುವ ಕೆಲಸ ಮಾಡಿದ್ದಾರೆ. ಶಾಸಕರಿಗೆ ಸೇರಿದ ಐಶಾರಾಮಿ ಕಾರುಗಳನ್ನೂ ಪರಿಶೀಲನೆ ಮಾಡಲಾಗಿದೆ. ಕಾರು ಒಳಭಾಗ, ಡಿಕ್ಕಿಯನ್ನೂ ಬಿಡದಂತೆ ಪರಿಶೀಲನೆ ಮಾಡಿದ್ದು, ಡಿಕ್ಕಿಯಲ್ಲಿ ಲಭ್ಯವಾದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

Related posts

Dharmasthala SIT Investigation: ಧರ್ಮಸ್ಥಳ ಕೇಸ್​ ಬಗ್ಗೆ ಮಾಸ್ಕ್​ ಮ್ಯಾನ್​ ಸುಳ್ಳು ಹೇಳ್ತಿರೋದ್ಯಾಕೆ..?

Publicspot

Byrathi Basavaraj; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಮುಂದಿರುವ ಮಾರ್ಗ ಏನು..?

Publicspot

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.. ಬಂಡಾರದ ಲೆಕ್ಕಾಚಾರ..

Publicspot

ಸಿನಿಮಾ ನಟಿಯ ಆರೋಪದ ಬಗ್ಗೆ ಅರವಿಂದ್‌ ರೆಡ್ಡಿ ಬಿಚ್ಚಿಟ್ಟ ಸೀಕ್ರೆಟ್‌ ಏನು..?

Publicspot

ಧರ್ಮಸ್ಥಳದಲ್ಲಿ ಇವತ್ತು ಹೈಟೆಕ್​ ತಂತ್ರಜ್ಞಾನದ ಜೊತೆಗೆ ಅಸ್ಥಿ ಆಪರೇಷನ್​..!!

Publicspot

ದರ್ಶನ್ ಪಾಲಿಗೆ ಕಠಿಣ ಆಗ್ತಿದೆ ಉರುಳು.. ಮಾಫಿ ಸಾಕ್ಷಿ ಬಿಚ್ಚಿಡೋ ಸತ್ಯವೇನು..?

Publicspot