The Public Spot
ಅಪರಾಧ

Hassan Death in birthday; ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ ವಿದ್ಯಾರ್ಥಿ.. ಸರ್ಕಾರದಿಂದ ಪರಿಹಾರ ಘೋಷಣೆ..

ಹಾಸನ ಜಿಲ್ಲೆ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಅಪಘಾತ ಪ್ರಕರಣದಲ್ಲಿ ಹುಟ್ಟು ಹಬ್ಬದ ದಿನವೇ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಸಳೆ ಹೊಸಹಳ್ಳಿ ಗ್ರಾಮದ ಗಣೇಶ ವಿಸರ್ಜನೆ ವೇಳೆ ಅಪಘಾತ ಘಟನೆಯಲ್ಲಿ ಮಿಥುನ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ನಿನ್ನೆ ಹುಟ್ಟುಹಬ್ಬ ಇದ್ದಿದ್ರಿಂದ ಗುರುವಾರ ಮಧ್ಯರಾತ್ರಿಯೇ ಹುಟ್ಟುಹಬ್ಬದ ಸಂಭ್ರಮ ಮಾಡಿದ್ದ ಮಿಥುನ್ ಹಾಗೂ ಸ್ನೇಹಿತರು ಭರ್ಜರಿ ಡ್ಯಾನ್ಸ್​ ಮಾಡಿ ಮಸ್ತಿ ಮಾಡಲು ನಿರ್ಧಾರ ಮಾಡಿದ್ದದರು. ಆದರೆ ಅಷ್ಟರಲ್ಲಿ ಘನಘೋರ ಘಟನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ತಿದ್ದ ಮಿಥುನ್​ ಅಸುನೀಗಿದ್ದಾನೆ.

ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಗಣಪತಿ ವಿಸರ್ಜನೆಯೂ ಇದ್ದಿದ್ರಿಂದ ಸಂಭ್ರಮ ಹಿಮ್ಮಡಿಯಾಗಿತ್ತು. ಮೆರವಣಿಗೆಯಲ್ಲಿ ಸ್ನೇಹಿತರೊಂದಿಗೆ ಹೆಜ್ಜೆ ಹಾಕಲು ತೆರಳಿದ್ದ ಮಿಥುನ್, ಹುಟ್ಟು ಹಬ್ಬದ ದಿನವೇ ದುರಂತ ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ಮಿಥುನ್​ ಸ್ಥಳದಲ್ಲೇ ಸಾವನ್ನಪ್ಪಿದ್ದನು. ಪೋಷಕರು ಬರುವ ತನಕ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮಿಥುನ್ ಮೃತದೇಹ ಇರಿಸಲಾಗಿದೆ. ಘಟನೆ ನಡೆಯುತ್ತಿದ್ದ ಹಾಗೆ ಸ್ಥಳಕ್ಕೆ ಆಗಮ ಇಸಿದ ಮಾಜಿ ಸಚಿವ ಹೆಚ್​.ಡಿ ರೇವಣ್ಣ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಆ ನಂತರ ಮಾತನಾಡಿದ ರೇವಣ್ಣ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪೊಲೀಸ್​ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಗಣೇಶ ಮೆರವಣಿಗೆ ದುರಂತದ ಬಗ್ಗೆ X Post ಮಾಡಿರುವ ಸಿಎಂ ಸಿದ್ದರಾಮಯ್ಯ, ಹಾಸನದ ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದು, ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಅದರ ಜೊತೆಗೆ ಗಾಯಾಳುಗಳಿಗೂ ಸಂಪೂರ್ಣ ಬಿಲ್​ ಭರಿಸುವುದಾಗಿ ಘೊಷಣೆ ಮಾಡಿದ್ದಾರೆ. ಹಾಸನ ಕಾಂಗ್ರೆಸ್​ ಸಂಸದ ಶ್ರೇಯಸ್​ ಪಟೇಲ್​ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುವುದಕ್ಕೆ ಕೈ ಜೋಡಿಸಿದ್ದಾರೆ. ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಅಶೋಕ್​, ಸಿಟಿ ರವಿ  ಸೇರಿದಂತೆ ಸಾಕಷ್ಟು ನಾಯಕರು ಸಂತಾಪ ಸೂಚಿಸಿದ್ದಾರೆ.

ಜೆಡಿಎಸ್​ ಯುವ ನಾಯಕ ನಿಖಿಲ್​ ಕುಮಾರಸ್ವಾಮಿ ಮಧ್ಯರಾತ್ರಿಯೇ ಹಾಸನ ಜಿಲ್ಲಾಸ್ಪತ್ರೆ ಹಿಮ್ಸ್​ಗೆ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದ್ದಾರೆ. ಸಾವನ್ನಪ್ಪಿದವರ ಕುಟುಂಬಗಳಿಗೆ ದುಃಖ ಭರಿಸುವ ಧೈರ್ಯವನ್ನು ಆ ದೇವರು ಕೊಡಲಿ ಎಂದಿದ್ದಾರೆ. ಹಾಸನ ಜೆಡಿಎಸ್​ ಶಾಸಕ ಸ್ವರೂಪ್​ ಜೊತೆಗೆ ಹಿಮ್ಸ್​ಗೆ ಭೇಟಿ ನೀಡಿ, ಶವಾಗಾರಕ್ಕೆ ಆಗಮಿಸಿ ಮೃತರನ್ನು ನೋಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಹಾಸನದ ಮೊಸಳೆ ಹೊಸಹಳ್ಳಿ ಅಪಘಾತ ಪ್ರಕರಣ ಆಗಿದೆ ಅನ್ನೋದು ಗೊತ್ತಾಗ್ತಿದ್ದ ಹಾಗೆ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದ್ದ ನಿಖಿಲ್ ಕುಮಾರಸ್ವಾಮಿ, ಗಾಯಾಳುಗಳಿಗೆ ಧೈರ್ಯ ತುಂಬಿದ್ದಾರೆ. ಆಸ್ಪತ್ರೆ ವೈದ್ಯರಿಂದ ಪರಿಸ್ಥಿತಿ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದಾರೆ ಜೆಡಿಎಸ್ ಯುವ ನಾಯಕ ನಿಖಿಲ್. ಜೆಡಿಎಸ್​  ಹಾಸನ ಶಾಸಕ ಸ್ವರೂಪ್ ಹಾಗೂ ಕೆ.ಆರ್ ಪೇಟೆ ಶಾಸಕ ಹೆಚ್.ಟಿ ಮಂಜುನಾಥ್ ನಿಖಿಲ್​ಗೆ ಸಾಥ್​ ನೀಡಿದ್ದಾರೆ.

Related posts

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ದಿನಕ್ಕೊಂದು ಎಡವಟ್ಟು.. ನಿನ್ನೆ ಒಂದು.. ಇವತ್ತು ಒಂದು..

Publicspot

Darshan Bail Order: ನಟ ದರ್ಶನ್ ಮತ್ತು ಪವಿತ್ರ ಗೌಡ ಬೇಲ್ ರದ್ದಾಗುತ್ತಾ..?

ಯಶವಂತಿ

ಪ್ರೀತಿ ಮಾಡು.. ಇಲ್ಲದಿದ್ರೆ ನೋಡು.. ಇದು ಪ್ರೇಮಿಗಳ ದಿನದ ವಿಶೇಷ..

Publicspot

ಬೆಂಗಳೂರಿನ ಮಂತ್ರಿ ಮಾಲ್‌ ಪಕ್ಕದಲ್ಲೇ ಪ್ರೇಯಸಿಯ ಕತ್ತು ಸೀಳಿ ಮರ್ಡರ್‌..!

Publicspot

7 ಕೋಟಿ ಲೂಟಿ ಮಾಡಿದವರು ಸಿಕ್ಕಿ ಬೀಳೋದು ಪಕ್ಕಾನಾ..?

Publicspot

ಮದುವೆಗೆ ಹೆಣ್ಣುಗಳು ಸಿಗದೆ ಬಳಲುತ್ತಿರುವಾಗ ವಂಚಕರ ಮಾಸ್ಟರ್​ ಪ್ಲ್ಯಾನ್​..!

Publicspot