The Public Spot
ರಾಜಕೀಯ

ಮಣಿಪಾಲ್​ ಆಸ್ಪತ್ರೆಯಲ್ಲಿ ದೇವೇಗೌಡರನ್ನು ಭೇಟಿಯಾದ ಜಮೀರ್.. ಸ್ಪಷ್ಟನೆ..

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರಿಗೆ ಅನಾರೋಗ್ಯ ಉಂಟಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಮಧ್ಯಾಹ್ನ ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಆರೋಗ್ಯ ವಿಚಾರಿಸುವ ಉದ್ದೇಶದಿಂದಲೇ ದೆಹಲಿಯಿಂದ ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಬಂದಿದ್ದರು.

ದೇವೇಗೌಡರ ಆರೋಗ್ಯ ವಿಚಾರಿಸಿದ ಬಳಿಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ, ದೇವೇಗೌಡರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಅನಾರೋಗ್ಯದ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ಯಾರು ಯಾವುದೇ ರೀತಿಯಲ್ಲಿ ಆತಂಕ ಪಡುವುದು ಬೇಡ ಎಂದಿದ್ದರು. ಆದರೆ ಕುಮಾರಸ್ವಾಮಿ ಭೇಟಿ ಮಾಡಿ ವಾಪಸ್​ ಆದ ಬೆನ್ನಲ್ಲೇ ಸಚಿವ ಜಮೀರ್​ ಅಹ್ಮದ್​ ಖಾನ್​​ ಮಣಿಪಾಲ್​ ಆಸ್ಪತ್ರೆಗೆ ಭೇಟಿ ನೀಡಿ ಗೌಡರ ಆರೋಗ್ಯ ವಿಚಾರಿಸಿದ್ದು, ಜೆಡಿಎಸ್​ ಕಾರ್ಯಕರ್ತರು ಹಾಗೂ ಗೌಡರ ಅಭಿಮಾನಿಗಳಿಗೆ ಆತಂಕ ಸೃಷ್ಟಿಸಿತ್ತು.

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ಆರೋಗ್ಯ ಕುರಿತು ವದಂತಿಗೆ ಜೆಡಿಎಸ್ ಟ್ವಿಟ್ಟರ್​ (X Post) ಅಕೌಂಟ್​ನಿಂದ ಸ್ಪಷ್ಟನೆ ನೀಡಿದ್ದು, ಆತ್ಮೀಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರವರು ಚೇತರಿಸಿಕೊಂಡು ಗುಣಮುಖರಾಗಿದ್ದಾರೆ. ಆರೋಗ್ಯವಾಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ ಆಗಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು X ಪೋಸ್ಟ್ ನಲ್ಲಿ ಮನವಿ ಮಾಡಿದ್ದಾರೆ. ಜನತೆಯ ಆಶೀರ್ವಾದ ಮತ್ತು ದೇವರನ್ನು ನಂಬಿರುವಂತವರು, ಹೀಗಾಗಿ ಅವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ಇನ್ನೂ ಮೂರು ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರುತ್ತಾರೆ. ಆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ ಎಂದಿದ್ದಾರೆ.

Related posts

ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ

admin

ಸತ್ಯ ಹೇಳಿದ್ದಕ್ಕೆ ಸಚಿವ ಸ್ಥಾನ ಕಿತ್ಕೊಳ್ತಾ ಕಾಂಗ್ರೆಸ್​ ಹೈಕಮಾಂಡ್​..?

Publicspot

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:

admin

ರಾತ್ರೋರಾತ್ರಿ ಸ್ಟ್ರಾಂಗ್‌ ರೂಮ್‌ ಓಪನ್‌ ಮಾಡಿದ್ದು ತಪ್ಪಲ್ಲವೇ..?

Publicspot

ಔಟ್‌ ಗೋಯಿಂಗ್‌ ಸಿಎಂ ಸಿದ್ದರಾಮಯ್ಯಗೆ ಮಗನ ಬಗ್ಗೆ ಅಷ್ಟೇ ಚಿಂತೆ..

Publicspot

ಕಾಂಗ್ರೆಸ್​ನಲ್ಲಿ ಡಿನ್ನರ್​ ಪಾಲಿ‘ಟ್ರಿಕ್ಸ್​’ ಡಿಕೆಶಿ ಉದ್ದೇಶ ಏನು..? ಸಿಎಂ ಆಗ್ತಾರಾ..?

Publicspot