The Public Spot
ರಾಜಕೀಯರಾಜ್ಯ

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿ

ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆ ಆಚರಿಸುವ ಸಂಬಂಧ ಬಿಬಿಎಂಪಿ ಕೇಂದ್ರ ಕಛೇರಿಯ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಆಯಾ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಯಿತು.

ಪಾಲಿಕೆಯ ಆರೋಗ್ಯ ವಿಭಾಗದಿಂದ ಪ್ರಥಮ ಚಿಕಿತ್ಸೆ ವ್ಯಸವ್ಥೆಗಾಗಿ ಆಂಬುಲೆನ್ಸ್ ವ್ಯವಸ್ಥೆ, ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ, ಕಾರ್ಯಕ್ರಮದ ದಿನ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಹಾಗೂ ಭದ್ರತೆಯ ಹಿತದೃಷ್ಠಿಯಿಂದ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಹಾಡುಗಳನ್ನು ಹಾಡಲು ಸೂಕ್ತ ತಂಡವನ್ನು ಆಯ್ಕೆ ಮಾಡಬೇಕು. ಪ್ರವೇಶ ದ್ವಾರಗಳ ಬಳಿ ತಪಾಸಣೆಗಾಗಿ ಪೊಲೀಸ್ ಸಿಬ್ಬಂದಿ ಹಾಗೂ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಸರಿಯಾಗಿ ಮಾಡಲು ಸೂಚಿಸಿದರು.

ಮಳೆಗಾಲ ಪ್ರಾರಂಭವಾಗಿದ್ದು, ಮೈದಾನದಲ್ಲಿ ಮಳೆಯಿಂದ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳು ತರಬೇತಿಗಾಗಿ ಬರುವ ವೇಳೆ ಅವರಿಗೆ ತಿಂಡಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಗದೀಶ್, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ನವೀನ್ ಕುಮಾರ್ ರಾಜು, ವಲಯ ಆಯುಕ್ತರಾದ ದಿಗ್ವಿಜಯ್ ಬೊಡ್ಕೆ, ರಮ್ಯಾ, ಉಪ ಆಯುಕ್ತರು, ವಲಯ ಜಂಟಿ ಆಯುಕ್ತರು, ಬಿಬಿಎಂಪಿ, ಪೊಲೀಸ್, ಬೆಸ್ಕಾಂ, ಲೋಕೋಪಯೋಗಿ, ಜಲಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

KARNATAKA SCHOOL LEAVE: ಇವತ್ತು 4 ಜಿಲ್ಲೆಗೆ ಮಳೆಯಬ್ಬರ.. 8 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ

Publicspot

ಕಾಂಗ್ರೆಸ್‌ ನಾಯಕರು ಏನೇ ಹೇಳಿದ್ರೂ ಅದು ನನಗೆ ಪ್ರಸಾದ..

Publicspot

ಸಿದ್ದರಾಮಯ್ಯ ರಾಜೀನಾಮೆ.. ಅವಧಿ ಪೂರ್ವ ಚುನಾವಣೆ ನಿರೀಕ್ಷೆ..!

Publicspot

ಅಪರೂಪದ ಸಮಾಗಮ, ಅಚ್ಚರಿಯ ಬೆಳವಣಿಗೆಗೆ ಕಾರಣವಾದ ಮೋದಿ..!

ಯಶವಂತಿ

ಜಾತಿ ಜನಗಣತಿ ಆರಂಭ.. ಇವತ್ತು ಹೈಕೋರ್ಟ್‌ನಲ್ಲಿ ಸಿಗುತ್ತಾ ಮಧ್ಯಂತರ ತಡೆ..?

Publicspot

‘ಕರ್ನಾಟಕದಲ್ಲಿ ಒಂದು ಕ್ಷೇತ್ರವನ್ನು ಕಳವು ಮಾಡಿದೆ ಬಿಜೆಪಿ’

Publicspot