The Public Spot
ದೇಶ-ವಿದೇಶ

LPG ತುಂಬಿದ 2 ಹಡಗು ತೆರಳಲು ಬಿಟ್ಟ ಭಾರತದ ಗೆಳಯ ಇರಾನ್‌..!

ಅಮೆರಿಕ-ಇಸ್ರೇಲ್‌ ಮೈತ್ರಿ ಪಡೆಗಳು ಇರಾನ್‌ ಮೇಲೆ ಯುದ್ಧ ಸಾರಿ ಕೆಟ್ಟಿವೆ ಎನ್ನುವ ಪರಿಸ್ಥಿತಿ ಎದುರಾಗಿದೆ. ಸಂಘರ್ಷ ಅಂತ್ಯವಾಗುವ ಲಕ್ಷಣಗಳು ಕಂಡುಬಂದಿಲ್ಲ. ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿ ಅಲ್‌-ಖುದ್ಸ್‌ ಮೆರವಣಿಗೆ ವೇಳೆ ಸ್ಫೋಟ ಸಂಭವಿಸಿದೆ. ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ಯಾಲೆಸ್ತಿನಿಯರ ಬೆಂಬಲ ಒಗ್ಗಟ್ಟಿನ ವಾರ್ಷಿಕ ಱಲಿಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದ ವೇಳೆ ಸ್ಫೋಟ ಸಂಭವಿಸಿದೆ.

ಇರಾನ್ ಶರಣಾಗತಿ ಚರ್ಚೆ ನಡುವೆಯೂ ದಾಳಿ ನಡೆಯುತ್ತಲೇ ಇದೆ. ಇರಾನ್ ಶರಣಾಗಲಿದೆ ಅಂತ ಈಗಾಗಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಜಿ-7 ರಾಷ್ಟ್ರಗಳ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಆದರೆ ಇರಾನ್‌ ಸರ್ವೋಚ್ಛ ನಾಯಕ ಭಾರತೀಯ ಎರಡು ಹಡಗುಗಳು ಹರ್ಮೂಜ್‌ ಜಲಸಂಧಿ ಮೂಲಕ ತೆರಳಲು ಅವಕಾಶ ನೀಡಿದೆ. ಈ ವೇಳೆ ಭಾರತ ನಮ್ಮ ಸ್ನೇಹಿತ ಎಂದು ಹೇಳಿದೆ ಇರಾನ್‌. ಅದೇ ಕಾರಣಕ್ಕಾಗಿ ಭಾರತೀಯ ಎರಡು LPG ತುಂಬಿದ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

ಒಮಾನ್‌ನ ಸೋಹಾರ್ ನಗರದ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದು, 10 ಭಾರತೀಯರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ. ಅಲ್-ಅವಾಹಿ ಕೈಗಾರಿಕಾ ಪ್ರದೇಶದಲ್ಲಿ ಡ್ರೋನ್ ದಾಳಿ ನಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕೊಲ್ಲಿ ವಿಭಾಗದ ಹೆಚ್ಚುವರಿ ಕಾರ್ಯದರ್ಶಿ ಅಸೀಮ್ ಮಹಾಜನ್ ಮಾಹಿತಿ ನೀಡಿದ್ದಾರೆ. ಮಸ್ಕತ್ ಬಳಿಯ ಸೋಹಾರ್ ನಗರದಲ್ಲಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ನಾವು ತೀವ್ರವಾಗಿ ವಿಷಾದಿಸುತ್ತೇವೆ ಎಂದಿದ್ದಾರೆ.

ಲೆಬೆನಾನ್‌ ಮೇಲೆ ಇಸ್ರೇಲ್‌ ದಾಳಿ ಮಾಡಿದ್ದು, 100ಕ್ಕೂ ಹೆಚ್ಚು ಮಂದಿ ಮಕ್ಕಳು ಸಾವನ್ನಪ್ಪಿದ್ದಾರೆ. ಅದೇ ರೀತಿ ಇರಾಕ್‌ನಲ್ಲಿ ಅಮೆರಿಕ ಸೇನಾ ಪಡೆಯ ಜೆಟ್‌‌ ವಿಮಾನ ಪತನವಾಗಿದ್ದು, ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ. ಇದನ್ನು ಸ್ವತಃ ಅಮೆರಿಕ ಸೇನೆಯೇ ಒಪ್ಪಿಕೊಂಡಿದೆ. ಇದು ಇರಾನ್‌ ಮಾಡಿರುವ ಕೃತ್ಯ ಅಲ್ಲ ಎಂದಿರುವ ಅಮೆರಿಕ ಸೇನೆ, ಆಕಸ್ಮಿಕ ಘಟನೆ ಎಂದು ತಿಳಿಸಿದೆ. ಇಂಧನ ಭರ್ತಿ ಮಾಡುವಾಗ ದುರ್ಘಟನೆ ನಡೆದಿದೆ ಎನ್ನಲಾಗ್ತಿದೆ.

Related posts

Stamped death; ತಮಿಳು ನಟ ವಿಜಯ್​​ Rally ಯಲ್ಲಿ ಕಾಲ್ತುಳಿತ.. 38 ಜನ ಸಾವು..!

Publicspot

Election Commission Deadline: ರಾಹುಲ್‌ ಗಾಂಧಿ ಈಗ ಏನ್‌ ಮಾಡ್ತಾರೆ..? ಉತ್ತರ ಏನು..?

Publicspot

ಇರಾನ್​ ಇನ್ಮುಂದೆ ಒಂಟಿಯಲ್ಲ.. ಚೀನಾ, ರಷ್ಯಾ ಬೆಂಬಲ.. ಯುದ್ಧ ಮತ್ತಷ್ಟು ತೀವ್ರ..

Publicspot

ಇರಾನ್​ ಅಷ್ಟು ಸುಲಭಕ್ಕೆ ಸೋಲು ಒಪ್ಪಿಕೊಳ್ಳುತ್ತಾ..? ಅಮೆರಿಕ ದಾಹಕ್ಕೆ ಮಣಿಯುತ್ತಾ..?

Publicspot

ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ದ್ವೇಷಕ್ಕೆ ಕಾರಣ ಏನು..? ಖಮೇನಿ ಕೊಂದಿದ್ಯಾಕೆ..?

Publicspot

Sugar Rate hike; ಸಕ್ಕರೆ MSP ದರ ಹೆಚ್ಚಳಕ್ಕೆ ಕೇಂದ್ರದ ಚಿಂತನೆ.. ಯಾರಿಗೆ ಲಾಭ..?

Publicspot