ಇಂದಿರಾ ಕ್ಯಾಂಟೀನ್​ನಲ್ಲಿ ಬದಲಾಯ್ತು ಊಟ-ತಿಂಡಿ ಮೆನು..!

ಕಾಂಗ್ರೆಸ್​​ ಸರ್ಕಾರದಲ್ಲಿ ಸಿದ್ದರಾಮಯ್ಯ ಬಡ ಜನರನ್ನು ಗುರಿಯಾಗಿಸಿ ಇಂದಿರಾ ಕ್ಯಾಂಟೀನ್ ಆರಂಭ ಮಾಡಿದ್ದರು. ಆ ಬಳಿಕ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್​ ಕಡೆಗೆ ಹೆಚ್ಚು ಗಮನ ಕೊಡಲಿಲ್ಲ. ಸಾಕಷ್ಟು ಬಡ ವರ್ಗದ ಜನರನ್ನು ಗಮನದಲ್ಲಿ ಇಟ್ಟುಕೊಂಡು ಸಿದ್ದರಾಮಯ್ಯ ಸರ್ಕಾರ ಮತ್ತೆ ಇಂದಿರಾ ಕ್ಯಾಂಟೀನ್​ಗೆ ಚಾಲನೆ ಕೊಡುವ ಕೆಲಸ ಮಾಡುತ್ತಿದೆ. ಜೊತೆಗೆ ಇಂದಿರಾ ಕ್ಯಾಂಟೀನ್​​ನಲ್ಲಿ ದರ್ಶಿನಿಗಳ ರೀತಿ ಮೇಲ್ದರ್ಜೆಗೆ ಏರಿಸುವ ಕೆಲಸವನ್ನೂ ಮಾಡಲಾಗ್ತಿದೆ. ಇದೇ ಕಾರಣಕ್ಕೆ ಇಂದಿರಾ ಕ್ಯಾಂಟೀನ್​ನಲ್ಲಿ ಹೊಸ ಮೆನೂ ಲಿಸ್ಟ್​ ಬಂದಿದೆ.

ಈ ಹಿಂದೆ ಇದ್ದ ಆಹಾರ ಮೆನೂ ಬದಲಾವಣೆ ಮಾಡಿರುವ ಬಿಬಿಎಂಪಿ, ಬಗೆ ಬಗೆಯ ತಿಂಡಿ ತಿನಿಸುಗಳೊಂದಿಗೆ ಲೋಕಾರ್ಪಣೆ ಮಾಡಲು ಸಿದ್ಧತೆ ಮಾಡಿಕೊಳ್ತಿದೆ. ಇಂದಿರಾ ಕ್ಯಾಂಟೀನ್ ಹೊಸ ಮೆನೂ ನೋಡೋದಾದ್ರೆ ಇಡ್ಲಿ ಚಟ್ನಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ – ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿ ನೀಡುವುದಕ್ಕೆ ತಯಾರಿ ಆಗ್ತಿದೆ. ಆದರೆ ಒಂದೇ ದಿನ ಇಷ್ಟೂ ವೆರೈಟಿ ಸಿಗುವುದಿಲ್ಲ. ಯಾವ ದಿನ ಏನೇನು ಆಹಾರ ಸಿಗುತ್ತದೆ ಅನ್ನೋದನ್ನು ನೋಡೋದಾದರೆ..

ಸೋಮವಾರ :

ಬೆಳಗ್ಗೆ : ಇಡ್ಲಿ – ಸಾಂಬಾರ್ / ಪಲಾವ್ – ರೈತ / ಬ್ರೆಡ್ – ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು + ಕೀರ್
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಮಂಗಳವಾರ :

ಬೆಳಗ್ಗೆ : ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ರೈತ / ಚಪಾತಿ + ವೆಜ್ ಕರಿ

ಬುಧವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ + ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ + ಸೊಪ್ಪು ಸಾರು

ಗುರುವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ

ಶುಕ್ರವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

ಶನಿವಾರ :

ಬೆಳಗ್ಗೆ : ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್
ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ಚಪಾತಿ ಸಾಗು + ಕೀರ್
ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ

ಭಾನುವಾರ :

ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ & ಜಾಮ್
ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು
ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

Related Posts

Don't Miss it !