ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ ಅಬ್ಬರ..! ಎಲ್ಲೆಲ್ಲಿ ಎಷ್ಟು ಮಳೆ..?

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಕಾರಣ ಜುಲೈ 18ರ ತನಕ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿತ್ತು. ಇದೀಗ ಮಳೆಯ ಅಬ್ಬರ ಮತ್ತೆ ಮೂರು ದಿನಗಳ ಕಾಲ ವಿಸ್ತರಣೆ ಆಗಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಕೆ ಕೊಟ್ಟಿದೆ.

3 ದಿನಗಳ ಕಾಲ ಗುಡುಗು ಸಹಿತ ಮಳೆ..!

ಜೈಲೈ 18 ರ ತನಕ ಈಗಾಗಲೇ ಮಳೆ ಬೀಳಲಿದೆ ಎಂದಿದ್ದ ಹವಾಮಾನ ಇಲಾಖೆ ಇದೀಗ ಇನ್ನೂ 3 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದಿದೆ. ಅಮದರೆ ಜುಲೈ 21ರ ತನಕ ಮಳೆ ತನ್ನ ಆರ್ಭಟ ಮುಂದುವರಿಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಮಳೆಯಬ್ಬರದಲ್ಲಿ ಸಾಗರ ಅಲೆಗಳು ಊಹೆಯನ್ನು ಮೀರಿ ಬರುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಆರೇಂಜ್​ ಅಲರ್ಟ್​ ಎಚ್ಚರಿಕೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಬೀಳಲಿದ್ದು, ಜುಲೈ 18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18 ರಿಂದ 19ರವರೆಗೆ ಆರೇಂಜ್‌ ಅಲರ್ಟ್‌ ನೀಡಲಾಗಿದ್ದು, ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್‌ ಘೋಷಣೆ

ಒಳನಾಡಿನಲ್ಲೂ ಭಾರೀ ಮಳೆ ಎಚ್ಚರಿಕೆ..!

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಜುಲೈ 19ರಂದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆ ಆಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳ ಕಾಲ ಇದೇ ರೀರಿ ಇರಲಿದ್ದು, ರಾಜ್ಯ ರಾಜಧಾನಿಯಲ್ಲಿ ಅಬ್ಬರದ ಮಳೆ ಸಾಧ್ಯತೆ ತೀರ ಕಡಿಮೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಡಾ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Related Posts

Don't Miss it !