The Public Spot
ರಾಜ್ಯ

KARNATAKA SCHOOL LEAVE: ಇವತ್ತು 4 ಜಿಲ್ಲೆಗೆ ಮಳೆಯಬ್ಬರ.. 8 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ

ರಾಜ್ಯದಲ್ಲಿ ಮಘೆ ಮಳೆ ಅಬ್ಬರ ಶುರುವಾಗಿದೆ. ಇವತ್ತು ಮತ್ತು ನಾಳೆ ರಾಜ್ಯದಲ್ಲಿ ಮಘೆ ಮಳೆ ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಕೆ ಅಲರ್ಟ್‌ ನೀಡಿದೆ. ರಾಜ್ಯದ 4 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗುತ್ತದೆ ಎಂದು ರೆಡ್ ಅಲರ್ಟ್ ನೀಡಲಾಗಿದೆ. ಅದೇ ರೀತಿ 7 ಜಿಲ್ಲೆಗಳಿಗೆ ಹೆಚ್ಚು ಮಳೆಯಾಗುತ್ತದೆ ಎಂದು ಆರೆಂಜ್ ಅಲರ್ಟ್‌ ನೀಡಲಾಗಿದೆ. ಇನ್ನುಳಿದ 20 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಮಘೆ ಮಳೆ ಅಬ್ಬರ ಹೆಚ್ಚಾಗಿದ್ದು, ಇಂದು 8 ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ರೆಡ್ ಅಲರ್ಟ್ ಜಿಲ್ಲೆಗಳು: ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಆರೆಂಜ್‌ ಅಲರ್ಟ್‌ ಜಿಲ್ಲೆಗಳು: ಬೆಳಗಾವಿ , ಗದಗ, ಧಾರವಾಡ, ಹಾವೇರಿ, ವಿಜಯಪುರ, ಕಲಬುರಗಿ, ದಕ್ಷಿಣ ಕನ್ನಡ, ಯೆಲ್ಲೋ ಅಲರ್ಟ್‌ ಜಿಲ್ಲೆಗಳು: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ತುಮಕೂರು, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ , ರಾಮನಗರ, ಯಾದಗಿರಿ, ಚಾಮರಾಜನಗರ, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಆಗಿದೆ. ಶಾಲಾ ಕಾಲೇಜಿಗೆ ಎಲ್ಲೆಲ್ಲಿ ರಜೆ ಘೋಷಣೆ ಮಾಡಲಾಗಿದೆ ಅನ್ನೋದನ್ನು ನೋಡೋದಾದರೆ..

ಉಡುಪಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಇವತ್ತು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪದವಿ ಪೂರ್ವ, ಐಟಿಐ ಕಾಲೇಜುಗಳಿಗೆ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಮಾಡಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ಒತ್ತಡ ಹೆಚ್ಚಾಗಿರುವ ಮುನ್ಸೂಚನೆ ಇದ್ದು, ಸಮುದ್ರದ ಅಲೆಗಳ ಅಬ್ಬರ ಅಪಾಯಕಾರಿ ಆಗಿರುತ್ತದೆ ಎಂದು ಹವಾಮಾನ ಇಲಾಖೆಯಿಂದ ಸೂಚನೆ ನೀಡಿದೆ. ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿ ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ನೀಡಲಾಗಿದೆ. ಆಳಸಮುದ್ದರ ಮೀನುಗಾರರು ಮೀನುಗಾರಿಕೆ ನಡೆಸುವಾಗ ಜಾಗರೂಕತೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ‌ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಕೆಲವು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಅರಕಲಗೂಡು, ಬೇಲೂರು ತಾಲ್ಲೂಕಿನ ಅರೆಹಳ್ಳಿ ಹಾಗು ಬಿಕ್ಕೋಡು ಹೋಬಳಿ ಹಾಗೂ ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಮತ್ತು ಪಾಳ್ಯ ಹೋಬಳಿಗಳಿಗೂ ರಜೆ ಘೋಷಣೆ ಆಗಿದೆ. ಕಳೆದ 3 ದಿನಗಳಿಂದ ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಿ ಡಿಸಿ ಲತಾಕುಮಾರಿ ಆದೇಶ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿದ್ದು, ಇಂದು ಶಾಲಾ ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡು ತಾಲೂಕಿನ ಶಾಲಾ – ಕಾಲೇಜುಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯಾ ಆದೇಶ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ‌ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಡಿಸಿ ಮೀನಾ ನಾಗರಾಜ್‌ ಆದೇಶ ಮಾಡಿದ್ದಾರೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ ತಾಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ, ಕಸಬಾ, ಅಂಬಳೆ ಹೋಬಳಿ ಮತ್ತು ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ ಹೋಬಳಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವ ಕಾರಣಕ್ಕೆ ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರೊ ಮಳೆ ಹಿನ್ನೆಲೆಯಲ್ಲಿ ಇವತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ‌ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇಂದಿನ ರಜೆಯನ್ನು ಹೊಂದಾಣಿಕೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಇಂದೂ ಕೂಡಲ ಜಿಲ್ಲೆಯ‌ 8 ತಾಲೂಕಿನ ಎಲ್ಲಾ ‌ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ಸವದತ್ತಿ, ರಾಮದುರ್ಗ, ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲೂಕಿನ ಶಾಲೆಗಳಿಗೆ ರಜೆ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ‌ರೋಷನ್ ಆದೇಶ ಮಾಡಿದ್ದಾರೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಹಾಗೂ ಸವದತ್ತಿಯಲ್ಲಿ ಶಾಲೆಗಳ ಜೊತೆಗೆ ಪದವಿ ಪೂರ್ವ ಕಾಲೇಜಿಗೂ ರಜೆ ನೀಡಲಾಗಿದೆ.

VICE PRESIDENT ELECTION: NDA ಉಪರಾಷ್ಟ್ರಪತಿ ಅಭ್ಯರ್ಥಿ ಯಾರು ಗೊತ್ತಾ..?

ಬೀದರ್ ಜಿಲ್ಲೆಯ ಔರಾದ್ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನೆರೆ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಔರಾದ್ ತಾಲೂಕಿನಾದ್ಯಂತ ಇವತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಾಲೂಕಿನ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ ತಹಶೀಲ್ದಾರ್ ಮಹೇಶ್ ಪಾಟೀಲ್. ಔರಾದ್‌ ತಾಲೂಕಿನಲ್ಲಿ ದಾಖಲೆಯ ಪ್ರಮಾಣದ ಮಳೆ ಆಗಿದೆ ಅನ್ನೋ ಮಾಹಿತಿ ಇದೆ.

Related posts

Congress MLA Shock; ಮಾಲೂರು ಶಾಸಕರಿಗೆ ಎದುರಾಗುತ್ತಾ ಶಾಕ್‌..?

Publicspot

ಕಾಂಗ್ರೆಸ್‌ ಸರ್ಕಾರಕ್ಕೆ ನೇಮಕಾತಿ ಬೇಕಿಲ್ವಾ..? ಬಿಜೆಪಿ ರಾಜಕೀಯ ಲಾಭನಾ..?

Publicspot

BJP Protest Against Potholes; ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ..

Publicspot

Ration Card Cancel; ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಹುದು.. ರಾಜ್ಯ ಸರ್ಕಾರ ಪ್ಲ್ಯಾನಿಂಗ್..

Publicspot

ಹಿರಿಯ ಕಾರ್ಮಿಕ ಹೋರಾಟಗಾರ ಅನಂತ್‌ ಸುಬ್ಬರಾವ್‌ ಇನ್ನಿಲ್ಲ.. ದೇಹವೂ ದಾನ..

Publicspot

RAIN EFFECT, SCHOOL CLOSED; ಭಾರೀ ಮಳೆ.. ಎಲ್ಲೆಲ್ಲಿ ಶಾಲೆಗಳಿಗೆ ರಜೆ ಘೋಷಣೆ..?

Publicspot