The Public Spot
Uncategorized

ಲ್ಯಾಂಡ್‌ ಲಾರ್ಡ್‌ ಸಿನಿಮಾಗೆ ತೆರಿಗೆ ವಿನಾಯ್ತಿ ಕೊಟ್ಟ ರಾಜ್ಯ ಸರ್ಕಾರ!

ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಸಂವಿಧಾನದ ಆಶಯ, ಉಳ್ಳವರು ಬಡವರ ನಡುವಿನ ಸಂಘರ್ಷದ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಜನರಿಂದ ಉತ್ತಮ ಮಾತುಗಳು ಕೇಳಿ ಬಂದಿದ್ದು, ಲ್ಯಾಂಡ್ ಲಾರ್ಡ್ ಚಿತ್ರಕ್ಕ ತೆರಿಗೆ ವಿನಾಯಿತಿ ನೀಡುವಂತೆ ದಲಿತ ಸಂಘಟನೆಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ತೆರಿಗೆ ವಿನಾಯಿತಿ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಸಿಎಂ ಸಿದ್ದರಾಮಯ್ಯ ಖಚಿತ ಪಡಿಸಿದ್ದಾರೆ.

ಲ್ಯಾಂಡ್ ಲಾರ್ಡ್ ಚಿತ್ರ ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ಚಿತ್ರವಾಗಿದ್ದು, ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾ ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ಇದು ಸಹಕಾರಿ ಆಗಲಿದೆ. ನಮ್ಮ ಸರ್ಕಾರದ ಈ ನಿರ್ಧಾರ ಮತ್ತಷ್ಟು ಉತ್ತಮ ಚಿತ್ರ ನಿರ್ಮಾಣಕ್ಕೆ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದಿದ್ದಾರೆ. ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದುನಿಯಾ ವಿಜಯ್ ಧನ್ಯವಾದ ತಿಳಿಸಿದ್ದಾರೆ. ತೆರಿಗೆ ವಿನಾಯಿತಿ ನೀಡುವಂತೆ ಮನವಿ‌ ಮಾಡಿದ್ದ ದಲಿತ ಸಂಘಟನೆಗಳಿಗೂ ಧನ್ಯವಾದ ತಿಳಿಸಿದ್ದಾರೆ.

ನಮ್ಮ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಗೌರವಾನ್ವಿತ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ದಲಿತ ಸಂಘರ್ಷ ಸಮಿತಿಯ (DSS). ಹಿರಿಯ ಮುಖಂಡರಿಗೆ ನಮ್ಮ ಚಿತ್ರತಂಡದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಈ ಸಂದರ್ಭದಲ್ಲಿ ನಮ್ಮ ಜೊತೆಗಿದ್ದ ಅಣ್ಣ ಮಾವಳ್ಳಿ ಶಂಕರ್, ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿಕುಮಾರ್ ಈಚಲಮರ, ಹರೀಶ್ ಭೈರಪ್ಪ, ಮುರಳಿ ಕಾಟಿ ಹಾಗೂ ವಿಜಯಕುಮಾರ್ ಸೋನಾರೆ ಅವರಿಗೆ ನಾವು ಸದಾ ಚಿರಋಣಿ ಎಂದಿದ್ದಾರೆ. ಈ ಕಾರ್ಯ ನೆರವೇರಲು ಸಹಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಪ್ರಭಾಕರ್ ಹಾಗು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳಾದ ಡಾ. ನೆಲ್ಕುಂಟೆ ವೆಂಕಟೇಶಯ್ಯಗೂ ಧನ್ಯವಾದ ತಿಳಿಸಿದ್ದಾರೆ.

Related posts

Cough syrup Death; ಪೋಷಕರೇ ಮಕ್ಕಳಿಗೆ ಕೆಮ್ಮು ಔಷಧಿ ಬಳಸಬೆಡಿ.. ಸಾವು ಸಂಭವಿಸುತ್ತೆ..

Publicspot

ಮೊದಲ ದಿನ ಅಬ್ಬರಿಸಿದ ಡೆವಿಲ್.. ಕಲೆಕ್ಷನ್​ ಆಗಿದ್ದೆಷ್ಟು..? ಯಾರು ಏನಂದ್ರು..?

Publicspot

Sudeep; ದರ್ಶನ್​​ ಬಗ್ಗೆ ಟೀಕೆ ಮಾಡಿದ್ರಾ ಸುದೀಪ್​.. ಕಿಚ್ಚನ ಮಾತು ಅಪಾರ್ಥ ಆಯ್ತಾ..?

Publicspot

ಉಗ್ರರು, ಅಪರಾಧಿಗಳ ಪಾಲಿನ ಸ್ವರ್ಗ ನಮ್ಮ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲು

Publicspot

ಸುಪ್ರೀಂಕೋರ್ಟ್​ನಲ್ಲಿ ಜಾಮೀನು ರದ್ದಾದ ವೇಳೆ ದರ್ಶನ್​ ಮಾಡಿದ್ದೇನು..?

Publicspot

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮತದಾನ ಹಬ್ಬ.. ಖರ್ಗೆಗೆ ಸಂಕಷ್ಟ..

Publicspot