The Public Spot
ರಾಜಕೀಯ

Okkaliga and Lingayath united; ಜಾತಿ ಗಣತಿ ಆರಂಭಕ್ಕೂ ಮುನ್ನವೆ ಬಲಾಢ್ಯರ ವಿರೋಧ.. ಸಣ್ಣ ಬಿರುಕು..

ರಾಜ್ಯದಲ್ಲಿ ಜಾತಿ ಸಮೀಕ್ಷೆ ಸೆಪ್ಟೆಂಬರ್‌ 22 ರಿಂದ ಆರಂಭ ಆಗುವ ಬಗ್ಗೆಯೇ ಗದ್ದಲ ಏರ್ಪಟ್ಟಿದೆ. ಈ ನಡುವೆ ಶನಿವಾರ ನಾಳೆ ಬೆಂಗಳೂರಿನಲ್ಲಿ ಸರ್ವ ಪಕ್ಷದ ಒಕ್ಕಲಿಗ ನಾಯಕರ ಸಭೆ ಕರೆಯಲಾಗಿದೆ.. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆಯುವ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​ ಸೇರಿದಂತೆ ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಆ ಸಭೆಯಲ್ಲಿ ಜಾತಿ ಜನಗಣತಿಯಿಂದ ಒಕ್ಕಲಿಗ ಸಮುದಾಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಹುಬ್ಬಳ್ಳಿಯಲ್ಲಿ ವೀರಶೈವ – ಲಿಂಗಾಯತ ಜಟಾಪಟಿ ತಾರಕಕ್ಕೇರಿದೆ. ವಿವಿಧ ಸ್ವಾಮೀಜಿಗಳ ವಿರುದ್ಧ ಲಿಂಗಾಯತ ಸಮುದಾಯದ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಜಾತಿಗಣತಿ ವಿಚಾರದಲ್ಲಿ ಸ್ವಾಮೀಜಿಗಳಿಂದ ಗೊಂದಲ ಸೃಷ್ಠಿಯಾಗಿದೆ. ವೀರಶೈವ ಹಾಗೂ ಲಿಂಗಾಯತ ಸಮಾಜದ ಜನತೆಯಲ್ಲಿ ಸ್ವಾಮೀಜಿಗಳು ಗೊಂದಲ ಸೃಷ್ಠಿಸಿದ್ದಾರೆ. ಜಾತಿ ಗಣತಿಯಲ್ಲಿ ಹಿಂದೂ ಎಂದು ಬರೆಸಿದರೆ ಲಿಂಗಾಯತರು ಶೂದ್ರರಾಗುತ್ತಾರೆ. ಯಾವುದೇ ಕಾರಣಕ್ಕೂ ಹಿಂದೂ ಎಂದು ಬರೆಸಬಾರದು. ಜಾತಿ ಗಣತಿಯಲ್ಲಿ ಲಿಂಗಾಯತ ಎಂದೇ ಬರೆಸಬೇಕು. ಆದರೆ ಸ್ವಾಮೀಜಿಗಳು ಯಾರ ಒತ್ತಡಕ್ಕೆ ಈ ರೀತಿ ಗೊಂದಲ ಸೃಷ್ಟಿಸ್ತಿದಾರೋ ಗೊತ್ತಿಲ್ಲ ಎಂದು ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ವಚನಾನಂದ ಸ್ವಾಮೀಜಿ ವಿರುದ್ಧ ಲಿಂಗಾಯತರ ಅಲ್ಪಸಂಖ್ಯಾತ ಮಾನ್ಯತೆಗಾಗಿ ಹೋರಾಟ ನಡೆಸಿ ಆಕ್ರೋಶ ಹೊರಹಾಕಿದೆ.

ಈ ನಡುವೆ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ವೀರಶೈವ – ಲಿಂಗಾಯತ ಏಕತಾ ಸಮಾವೇಶ ಆಯೋಜಿಸಲಾಗಿದೆ. ಇಂದು ಮಧ್ಯಾಹ್ನ 3 ಗಂಟೆ ಸಮಾವೇಶ ನಡೆಯಲಿದೆ. ಅದಕ್ಕೂ ಮುನ್ನ ನಗರದ ಮೂರು ಸಾವಿರ ಮಠದ ಆವರಣದಿಂದ ನೆಹರೂ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಮೆರವಣಿಗೆ ನಡೆಯಲಿದ್ದು, ವಿವಿಧ ಮಠಾಧೀಶರು, ಶಾಸಕರು, ಜನತೆ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆಂದು ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಸಮಾವೇಶಕ್ಕೆ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳ ಮಠಾಧೀಶರು ಭಾಗಿಯಾಗುತ್ತಿದ್ದಾರೆ. ಲಕ್ಷಾಂತರ ಜನ ಸೇರುವ ನಿರೀಕ್ಷೆಯಿದ್ದು, ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ.

ಏಕತಾ ಸಮಾವೇಶದಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಸೆಡ್ಡು ಹೊಡೆಯಲಾಗ್ತಿದೆ. ಒಂದು ಕಡೆ ವಿರಕ್ತ ಮಠಗಳ ಸ್ವಾಮೀಜಿಗಳು ಬಸವ ಅಭಿಯಾನ ಮಾಡ್ತಿದ್ರೆ ಮತ್ತೊಂದು ಕಡೆ ವೀರಶೈವ – ಲಿಂಗಾಯತ ಏಕತೆಯ ಜಪ ಮಾಡಲಾಗ್ತಿದೆ. ಪಂಚಮಸಾಲಿ ಪೀಠದ ಸ್ವಾಮೀಜಿಗಳು ಹಿಂದೂ ಪರ ಬ್ಯಾಟಿಂಗ್ ಮಾಡ್ತಿದ್ದಾರೆ. ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಏಕತಾ ಸಮಾವೇಶ ಮಾಡ್ತಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಸಾಥ್ ಕೊಡ್ತಿದೆ. ಒಂದು ಸಾವಿರಕ್ಕೂ ಅಧಿಕ ಸ್ವಾಮೀಜಿಗಳು ಭಾಗಿಯಾಗೋ ನಿರೀಕ್ಷೆಯಿದೆ. ಹಲವು ಸಚಿವರು, ಶಾಸಕರು, ಮಾಜಿ ಶಾಸಕರು ಭಾಗಿಯಾಗಲಿದ್ದಾರೆ. ಲಿಂಗಾಯತರು – ವೀರಶೈವರು ಒಂದೇ ಎಂದು ಸಾರಲಿದ್ದಾರೆ.

Related posts

Hello Karge Here; ಬೆಳಗ್ಗೆ ಮನೆಗೆ ಬನ್ನಿ ಮಾತನಾಡ್ಬೇಕು..! ಸಿಎಂ ಮನವೊಲಿಸ್ತಾರಾ ಖರ್ಗೆ..?

Publicspot

CM Finally; ಸಿಎಂ ಆಗಲು ಪಟ್ಟು ಹಿಡಿದು ಕುಳಿತ ಡಿ.ಕೆ ಶಿವಕುಮಾರ್​.. ಶಕ್ತಿ ವೃದ್ಧಿಗೆ ಸರ್ಕಸ್​..

Publicspot

ಇ-ಖಾತಾ ನಿಮ್ಮ ಆಸ್ತಿ, ನಿವೇಶನಗಳ ಮಾಲೀಕತ್ವಕ್ಕೆ ಇರುವ ಅಧಿಕೃತ ದಾಖಲೆ

admin

ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ

admin

ಸರ್ಕಾರ ಸಾಲ ತೀರಿಸಲು ಶಾಸಕರಿಂದ ಸಖತ್‌‌ ಐಡಿಯಾ..?

Publicspot

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಹೆಕಮಾಂಡ್‌ಗೆ ಡೈನಾಮೇಟ್‌..

Publicspot