ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ಸ್ವೀಕಾರ..! ಇವರೆಲ್ಲಾ ಗೈರು ಹಾಜರಿ..

ರಾಜ್ಯದ 30ನೇ ಮುಖ್ಯಮಂತ್ರಿ ಆಗಿ ಶಿಗ್ಗಾಂವಿ ಕ್ಷೇತ್ರದ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನೂರಾರು ಕಾರ್ಯಕರ್ತರು ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಮುಖ್ಯಮಂತ್ರಿ ಆಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಗೌಪ್ಯತವಿಧಿ ಬೋಧಿಸಿದ್ರು. ಪ್ರಮಾಣ ವಚನ ಸ್ವೀಕಾರ ವೇಳೆ ಕೊಂಚ ಗಾಬರಿ ಮಾಡಿಕೊಂಡ ಬಸವರಾಜ ಬೊಮ್ಮಾಯಿ ತೊದಲು ನುಡಿಗಳಿಗೆ ಸಾಕ್ಷಿಯಾದರು. ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ಬಳಿಕ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಾಗೂ ರಾಜ್ಯಪಾಲರು ನೂತನ ಮುಖ್ಯಮಂತ್ರಿ ಬಸವರಾಜ […]

ನನ್ನ ಆಡಳಿತದಲ್ಲಿ ಯಾರ ಹಸ್ತಕ್ಷೇಪವೂ ಇರಲ್ಲ – ನಿಯೋಜಿತ ಸಿಎಂ ಭರವಸೆ

ಬಿ.ಎಸ್​ ಯಡಿಯೂರಪ್ಪ ಸರ್ಕಾರದಲ್ಲಿ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಹೆಚ್ಚಾಗಿತ್ತು ಎನ್ನುವುದೇ ಪ್ರಮುಖ ಆರೋಪವಾಗಿತ್ತು. ಆದರೆ ನನ್ನ ಆಡಳಿತದಲ್ಲಿ ಯಾರೊಬ್ಬರ ಹಸ್ತಕ್ಷೇಪ ಇರಲ್ಲ, ಪಾರದರ್ಶಕ ಆಡಳಿತ ನೀಡುತ್ತೇನೆ ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ಘೋಷಣೆ ಆದ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನವಿ ಮಾಡಿದ ಬಳಿಕ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಿದರು. ರಾಜ್ಯ ಅಧ್ಯಕ್ಷ ನಳೀನ್​ ಕುಮಾರ್​ ಜೊತೆಗೆ ಚರ್ಚೆ […]

ಬಸವರಾಜ ಬೊಮ್ಮಾಯಿ ನೂತನ ಸಿಎಂ, ಹೈಕಮಾಂಡ್​ ಆಟಕ್ಕೆ BSY ಬ್ರೇಕ್​..!

ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷ ಅನುಮೋದನೆ ಮಾಡಿದೆ. ಸ್ವತಃ ಬಿ.ಎಸ್​ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಪ್ರಸ್ತಾವನೆ ಮಾಡಿದ್ದು, ಮಾಜಿ ಸಚಿವ ಗೋವಿಂದ ಕಾರಜೋಳ ಅನುಮೋದನೆ ಮಾಡಿದ್ದಾರೆ. ಇಡೀ ಸಭೆ ಚಪ್ಪಾಳೆ ತಟ್ಟುವ ಮೂಲಕ ಬಸವರಾಜ ಬೊಮ್ಮಾಯಿ ಅವರ ಆಯ್ಕೆಯನ್ನು ಒಮ್ಮತದಿಂದ ಒಪ್ಪಿಗೆ ಸೂಚಿಸಿದೆ. ಸೋತು ಗೆದ್ದ ಯಡಿಯೂರಪ್ಪ, ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ..! ಆರ್​ಎಸ್​ಎಸ್​ ಹಿನ್ನೆಲೆ ಇರುವ ನಾಯಕರನ್ನು ಸಿಎಂ ಮಾಡಬೇಕು ಎನ್ನುವ […]