ಬಿಜೆಪಿ, ಕಾಂಗ್ರೆಸ್​​ ರಾಜಕಾರಣಿಗಳಿಗೆ ವರಮಹಾಲಕ್ಷ್ಮೀ ಹಬ್ಬದ ಬಂಪರ್​ ಗಿಫ್ಟ್​..!

ಕಾಂಗ್ರೆಸ್​ ನಾಯಕ, ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಹಾಗೂ ಬಿಜೆಪಿ ನಾಯಕ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದನಲ್ಲಿ ಜೈಲು ಸೇರಿದ್ದ ವಿನಯ್​ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಕಳೆದ ವಾರ ಕೊಲೆ ಕೇಸ್​ನಲ್ಲಿ ಸುಪ್ರೀಂಕೋರ್ಟ್​ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷ್ಯ ನಾಶ ಪ್ರಕರಣದಲ್ಲಿ ಜನಪ್ರತಿನಿಧಿ ಕೋರ್ಟ್​ನಲ್ಲಿ ಜಾಮೀನು ಸಿಗದಿದ್ದ ಕಾರಣಕ್ಕೆ ಜೈಲಿನಲ್ಲೇ ಕಾಲ ಕಳೆಯುವಂತಾಗಿತ್ತು. […]