ಸಚಿವ ಸ್ಥಾನ ಕೊಡದಿದ್ದರೂ ಪರವಾಗಿಲ್ಲ, ಗೌಡರ ಮನೆಗೆ ಹೋಗಿದ್ದು ಸರಿಯಲ್ಲ..!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಹೆಚ್​. ಡಿ ದೇವೇಗೌಡರ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದರು. ಇದೇ ವೇಳೆ ದೇವೇಗೌಡರನ್ನು ಮುಖ್ಯಮಂತ್ರಿ ಸನ್ಮಾನಿಸಿದ್ದರು. ಬಳಿಕ ಮಾತನಾಡಿ ಬಸವರಾಜ ಬೊಮ್ಮಾಯಿ ದೇವೇಗೌಡರು ಕರ್ನಾಟಕದ ಹಿತ ಬಯಸುವ ವ್ಯಕ್ತಿ ಹಾಗಾಗಿ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದಿದ್ದರು. ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿ, ಬಸಬರಾಜ ಬೊಮ್ಮಾಯಿ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಏನಾದರೂ ಸಮಸ್ಯೆ ಎದುರಾದರೆ ನಾನು ಬೆಂಬಲಿಸುತ್ತೇನೆ ಎನ್ನುವ ಮೂಲಕ ಬಿಜೆಪಿಗೆ ಬಹಿರಂಗ ಬೆಂಬಲ ಘೋಷಣೆ ಮಾಡಿದ್ದರು. ಈ ಬಗ್ಗೆ ಬಿಜೆಪಿ ಹಾಸನ […]