ಮಹಾರಾಷ್ಟ್ರದಲ್ಲಿ ಸರ್ಕಾರ ಬಿದ್ದು ಹೋಯ್ತು..! ಮುಂದೇನು ಆಗುತ್ತೆ..?

ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಮಹಾ ಅಘಾಡಿ ಸರ್ಕಾರ ಉರುಳಿದೆ. ಶಿವಸೇನೆಯ 40 ಶಾಸಕರು ಬಂಡಾಯ ಎದ್ದು ಅಸ್ಸಾಂನ ಗುವಹಾಟಿಯಲ್ಲಿ ವಾಸ್ತವ್ಯ ಹೂಡಿದ್ದರಿಂದ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದಕ್ಕೂ ಮೊದಲು ರಾಜ್ಯಪಾಲರು ವಿಶ್ವಾಸಮತ ಯಾಚನೆ ಮಾಡುವಂತೆ ಉದ್ಧವ್​ ಠಾಕ್ರೆಗೆ ಸೂಚನೆ ಕೊಟ್ಟಿದ್ದರು. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಸತತ ಮೂರೂವರೆ ಗಂಟೆಗಳ ವಿಚಾರಣೆಯಲ್ಲಿ ವಾದ ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್​ ನ್ಯಾಯಮೂರ್ತಿಗಳು ರಾತ್ರಿ 9 ಗಂಟೆ ಸುಮಾರಿಗೆ ತೀರ್ಪು ನೀಡಿದ್ದರು. ವಿಶ್ವಾಸಮತ […]