ಹೂಮಾಲೆ ಹಾಕಿ B.S​​ ಯಡಿಯೂರಪ್ಪ ಅವರನ್ನು ಬಂಧಿಸಿತೇ ಬಿಜೆಪಿ ಹೈಕಮಾಂಡ್​..?

ಕರ್ನಾಟಕ ರಾಜಕೀಯದಲ್ಲಿ ತನ್ನದೇ ಆದ ಛಾಪು ಹೊಂದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್​​ ಪ್ರಮುಖ ಸ್ಥಾನಮಾನ ನೀಡಿದೆ. ರಾಷ್ಟ್ರೀಯ ಚುನಾವಣಾ ಸಮಿತಿ ಹಾಗು ಪಕ್ಷದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ 11 ಜನರ ಸಂಸದೀಯ ವ್ಯವಹಾರಗಳ ಸಮಿತಿಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಹೈಕಮಾಂಡ್​ ಮಹತ್ವದ ಹೆಜ್ಜೆ ಇರಿಸಿದೆ. ಮುಖ್ಯಮಂತ್ರಿ ಹುದ್ದೆಯಿಂದ ಇಳಿದ ಬಳಿಕ ಯಾವುದೇ ಹುದ್ದೆ ಇಲ್ಲದೆ ರಾಜ್ಯದಲ್ಲಿ ಅತಂತ್ರವಾಗಿದ್ದ ಯಡಿಯೂರಪ್ಪ ಅವರನ್ನು ದೆಹಲಿಗೆ ಸೆಳೆಯುವ […]