ರಾತ್ರೋರಾತ್ರಿ ಬಿಜೆಪಿಯಲ್ಲಿ ಲೆಕ್ಕಾಚಾರ ರಾಜಕೀಯ.. ಯಡಿಯೂರಪ್ಪ ಜೊತೆ ಸಿಎಂ ಚರ್ಚೆ..!

ಬಿಟ್ ಕಾಯಿನ್ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಲೆದಂಡ ಆಗಲಿದೆ. ಆ ಬಳಿಕ ಬಿಜೆಪಿ ಮೂರನೇ ಮುಖ್ಯಮಂತ್ರಿ ಆಯ್ಕೆ ಮಾಡುವುದು ಖಚಿತ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದರು. ಸ್ವತಃ ಕಾಂಗ್ರೆಸ್ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳುವ ಪ್ರಯತ್ನ ಮಾಡಿದ್ರು. ಆದ್ರೆ ಇದೀಗ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಿಯಾಂಕ್ ಖರ್ಗೆ ಕೊಟ್ಟ ಮಾಹಿತಿ ಸತ್ಯವಾಗುವ ಮುನ್ಸೂಚನೆ ನೀಡುತ್ತಿವೆ. ಮುಖ್ಯಮಂತ್ರಿ ಬದಲಾವಣೆ ಖಚಿತ ಆಗ್ತಿದ್ದು, ಕುರ್ಚಿಯಿಂದ ಉರುಳಿಸುವ ಹಾಗೂ ಕುರ್ಚಿ ಉಳಿಸಿಕೊಳ್ಳುವ ಎರಡೂ ರೀತಿಯ […]