ಬಂಗಾಳದಲ್ಲಿ ಮಾನ ಉಳಿಸಿಕೊಂಡ ಕಾಂಗ್ರೆಸ್​​, ದೀದಿಗಿರಿ ತಡೆಯಲಾಗದೆ ಮೋದಿಗೆ ಮುಖಭಂಗ..!!

ಪಶ್ಚಿಮ ಬಂಣಗಾಳದಲ್ಲಿ ನಡೆದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನಾಯಕತ್ವದ ತೃಣಮೂಲ ಕಾಂಗ್ರೆಸ್​ ಜಯಭೇರಿ ಬಾರಿಸಿದೆ. ಅದರಲ್ಲೂ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧೆ ಮಾಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ದಾಖಲೆಯ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬರೇವಾಲ್​ ಅವರನ್ನು ಬರೋಬ್ಬರಿ 58,389 ಮತಗಳ ಅಂತರದಿಂದ ಜಯಸಾಧಿಸಿದ್ದಾರೆ. ಮಮತಾ ಬ್ಯಾನರ್ಜಿ ಒಟ್ಟು 84,709 ಮತಗಳನ್ನು ಗಳಿಸಿದ್ರೆ, ಬಿಜೆಪಿ ಅಭ್ಯರ್ಥಿ ಕೇವಲ 26,320 ಮತಗಳನ್ನು ಪಡೆಯಲು ಶಕ್ತರಾಗಿದ್ದಾರೆ. CPIM ಪಕ್ಷದ ಅಭ್ಯರ್ಥಿ 4,201 ಮತಗಳನ್ನು ಮಾತ್ರ ಪಡೆದುಕೊಂಡಿದ್ದಾರೆ. […]