ಲಿಂಗಾಯತರಿಗಿಲ್ಲ ಸಿಎಂ ಸ್ಥಾನ..! ಬ್ರಾಹ್ಮಣ ಸಮುದಾಯಕ್ಕೆ ಬಹುತೇಕ ಫಿಕ್ಸ್​..

`ರಾಜ್ಯ ಸರ್ಕಾರದ ಮುಖ್ಯಸ್ಥ ಸಿಎಂ ಸ್ಥಾನವನ್ನು ಬದಲಾವಣೆ ಮಾಡಲಾಗಿದೆ. ಸಿಎಂ ಸ್ಥಾನಕ್ಕೆ ಬಿ.ಎಸ್​ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿ ಹಂಗಾಮಿ ಸಿಎಂ ಆಗಿ ಮುಂದುವರಿದಿದ್ದಾರೆ. ಇಂದು ಸಂಜೆ ಬಿಜೆಪಿ ಶಾಸಕಾಂಗದ ಸಭೆ ನಿಗದಿಯಾಗಿದೆ. 7.30ಕ್ಕೆ ಕ್ಯಾಪಿಟಲ್​ ಹೋಟೆಲ್​ನಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ. ಆದರೆ ಈಗಾಗಲೇ ದೆಹಲಿಯ ಹೈಕಮಾಂಡ್​ ನಾಯಕರು ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎನ್ನುವ ಬಗ್ಗೆ ಅಂತಿಮ ನಿರ್ಧಾರ ಮಾಡಿ ಆಗಿದೆ ಎನ್ನಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಸಂಸದ […]