14 ಮಹಡಿಯಿಂದ ಬಿದ್ದು ಬಾಲಕ ಆತ್ಮಹತ್ಯೆ.. ತಪ್ಪು ಪೋಷಕರದ್ದೋ..? ಶಾಲೆಯದ್ದೋ..?

ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದು ಹೋಗಿದೆ. 10ನೇ ತರಗತಿ ಓದುತ್ತಿದ್ದ ಬಾಲಕನೊಬ್ಬ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. SSLC ಓದುತ್ತಿದ್ದ ವಿದ್ಯಾರ್ಥಿ ಮೋಯಿನ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗವಾರ ಬಳಿಯ RR ಸಿಗ್ನೇಚರ್ ಅಪಾರ್ಟ್‌ಮೆಂಟ್‌ನ ಮೇಲಿಂದ ಕೆಳಕ್ಕೆ ಬಿದ್ದಿದ್ದಾನೆ. ಖಾಸಗಿ ಶಾಲೆಯಲ್ಲಿ SSLC ಓದುತ್ತಿದ್ದ ವಿದ್ಯಾರ್ಥಿ ಮೋಯಿನ್, ಪರೀಕ್ಷೆ ವೇಳೆ ಕಾಪಿ ಹೊಡೆದಿದ್ದ ಅನ್ನೋ ಕಾರಣಕ್ಕೆ ಶಾಲೆಯಿಂದ ಹೊರಕ್ಕೆ ಹಾಕಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿ ಮೋಯಿನ್​ ನೇರವಾಗಿ ಅಪಾರ್ಟ್​ಮೆಂಟ್​ ಮೇಲಕ್ಕೆ ಹೋಗಿ ಅಲ್ಲಿಂದ ಜಿಗಿದಿದ್ದಾನೆ. […]