The Public Spot
ರಾಜ್ಯ

CAG REPORT; ಜನರಿಗೆ ಗ್ಯಾರಂಟಿ ಕೊಡಲು ಸಾಲ ಮಾಡಿದ್ದಾರೆ ಸಿದ್ದರಾಮಯ್ಯ..!!

ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತೋರಿಸಿ ಮತ ಸೆಳೆದಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದೀಗ ವಿಧಾನಸಭಾ ಅಧಿವೇಶನದಲ್ಲಿ ಗ್ಯಾರಂಟಿ ಹಿಂದಿನ ಅಸಲಿಯತ್ತು ಬಯಲಾಗಿದೆ. ಪದೇ ಪದೇ ರಾಜ್ಯದ ಜನರಿಗೆ 52 ಸಾವಿರ ಕೋಟಿ ರೂಪಾಯಿ ಗ್ಯಾರಂಟಿ ಮೂಲಕ ನೀಡುತ್ತಿದ್ದೇವೆ ಎಂದು ಹೊಗಳಿಕೊಳ್ಳುವ ಕಾಂಗ್ರೆಸ್​ ಸರ್ಕಾರ ಭರ್ಜರಿಯಾಗಿ ಸಾಲ ಮಾಡಿದೆ ಅನ್ನೋದು ಸರ್ಕಾರದ ವರದಿಯಿಂದಲೇ ಬಹಿರಂಗ ಆಗಿದೆ. ಸಾಲದ ಪ್ರಮಾಣ ಹೆಚ್ಚಳ ಆಗಿದೆ. ವಿತ್ತಿಯ ಕೊರತೆ ಹೆಚ್ಚಳವಾಗಿದೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಜಿ ವರದಿ ಮಂಡನೆ ಮಾಡಿದ್ದಾರೆ. 2023-24 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ 63 ಸಾವಿರ ಕೋಟಿ ವೆಚ್ಚ ಮಾಡಿರುವುದಾಗಿ ವರದಿಯಲ್ಲಿ ಹೇಳಲಾಗಿದೆ. ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ ನಿವ್ವಳ ಮಾರುಕಟ್ಟೆ ಸಾಲ ಮಾಡಿರುವುದಾಗಿ ಮಾಹಿತಿ ಕೊಟ್ಟಿದ್ದಾರೆ. ರಾಜ್ಯ ಹಣಕಾಸು ವ್ಯವಹಾರಗಳ ಕುರಿತ ಮಹಾಲೇಖಪಾಲರ ಲೆಕ್ಕಪರಿಶೋಧನಾ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

CAG ವರದಿಯಲ್ಲಿ 2023-24 ನೇ ಸಾಲಿನಲ್ಲಿ ಸರ್ಕಾರದ ವೆಚ್ಚ, ಹಣಕಾಸು ನಿರ್ವಹಣೆ, ಬಜೆಟ್‌ಗೆ ಸಂಬಂಧಿಸಿದ ವಿವರಗಳ ಉಲ್ಲೇಖ ಮಾಡಲಾಗಿದೆ. ಒಟ್ಟು ರಾಜಸ್ವ ವೆಚ್ಚದಲ್ಲಿ ಶೇಕಡ 15 ರಷ್ಟು ಪಾಲನ್ನು ಪಂಚ ಗ್ಯಾರಂಟಿಗಳಿಗೆ ವಿನಿಯೋಗ ಮಾಡಲಾಗಿದೆ. 2023-24 ಸಾಲಿನಲ್ಲಿ ಪ್ರತಿ ತಿಂಗಳು ಮಹಿಳೆಯರಿಗೆ ನೀಡುವ ಗೃಹ ಲಕ್ಷ್ಮಿ ಯೋಜನೆಗೆ ₹16,964 ಕೋಟಿ, ಮನೆ ಮನೆಗೆ ವಿದ್ಯುತ್​​ ಫ್ರಿ ಎಂದಿದ್ದ ಗೃಹ ಜ್ಯೋತಿ ಯೋಜನೆಗೆ 8,900 ಕೋಟಿ ರೂಪಾಯಿ, ಪ್ರತಿ ತಿಂಗಳು ನೀಡುವ ಪಡಿತರ ಅಕ್ಕಿಯ ಅನ್ನಭಾಗ್ಯ ಯೋಜನೆಗೆ 7,384 ಕೋಟಿ ರೂಪಾಯಿ, ಮಹಿಳೆಯರ ಉಚಿತ ಬಸ್​ ಪ್ರಯಾಣದ ಶಕ್ತಿ ಯೋಜನೆಗೆ 3,200 ಕೋಟಿ ರೂಪಾಯಿ ಮತ್ತು ಯುವಕ ಯುವತಿಯರ ಉದ್ಯೋಗ ಭತ್ಯೆ ಯುವನಿಧಿಗೆ 88 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎನ್ನುವುದು ಗೊತ್ತಾಗಿದೆ.

ಪಂಚ ಗ್ಯಾರಂಟಿಗಳಿಗಾಗಿ ಕಳೆದ ಆರ್ಥಿಕ ಸಾಲಿನಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ಸಾಲ ಮಾಡಲಾಗಿದೆ ಎನ್ನುವುದು ಸಿಎಜಿ ವರದಿಯಲ್ಲಿ ಗೊತ್ತಾಗಿದೆ. ಪಂಚ ಗ್ಯಾರಂಟಿಗಳಿಂದ ಸರ್ಕಾರದ ವಿತ್ತೀಯ ಕೊರತೆ ಉಂಟಾಗಿದೆ. 46,623 ಕೋಟಿ ರೂಪಾಯಿ ಇಂದ 65,522 ಕೋಟಿ ರೂಪಾಯಿಗೆ ಹೆಚ್ಚಳ ಆಗಿದೆ. ಗ್ಯಾರಂಟಿ ಯೋಜನೆಗಳು ಮತ್ತು ಅದರಿಂದ ಉಂಟಾದ ಕೊರತೆಗಳಿಗೆ ಸರ್ಕಾರ ಹಣಕಾಸು ಒದಗಿಸಲು ರಾಜ್ಯ ಸರ್ಕಾರ ₹63,000 ಕೋಟಿಗಳನ್ನು ನಿವ್ವಳ ಮಾರುಕಟ್ಟೆ ಸಾಲವನ್ನು ಪಡೆದುಕೊಂಡಿತ್ತು. ಇದು 2022-23 ಸಾಲಿನ ನಿವ್ವಳ ಸಾಲಕ್ಕಿಂತ ₹37,000 ಕೋಟಿ ಹೆಚ್ಚಾಗಿದೆ ಎನ್ನುವುದನ್ನು CAG REPORT ರಾಜ್ಯದ ಜನರ ಮುಂದಿಡಲಾಗಿದೆ. 2022-23 ಸಾಲಿಗೆ ಹೋಲಿಸಿದರೆ ಗ್ಯಾರಂಟಿ ಯೋಜನೆಗಳು ಮೂಲಸೌಕರ್ಯಕ್ಕಾಗಿ ಬಂಡವಾಳ ವೆಚ್ಚವನ್ನು ಸುಮಾರು ₹5,229 ಕೋಟಿಗಳಷ್ಟು ಕಡಿಮೆ ಮಾಡಿದೆ ಎಂದು ವಿವರಣೆ ನೀಡಲಾಗಿದೆ.

Related posts

BJP Protest Against Potholes; ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ..

Publicspot

RSS Ban War; ಕರ್ನಾಟಕದ ನೆಲದಲ್ಲೇ ನಿಂತು ಸರ್ಕಾರಕ್ಕೆ ಮೋಹನ್‌ ಭಾಗವತ್‌ ತಿರುಗೇಟು..

Publicspot

Cast Censes Karnataka Highcourt Conditions; ಜಾತಿ ಸಮೀಕ್ಷೆ ಅಲ್ಲ.. ಆರ್ಥಿಕ, ಸಾಮಾಜಿಕ ಸಮೀಕ್ಷೆ.. ವಾದ ಒಪ್ಪಿದ ಹೈಕೋರ್ಟ್‌

Publicspot

Ration Card Cancel; ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಹುದು.. ರಾಜ್ಯ ಸರ್ಕಾರ ಪ್ಲ್ಯಾನಿಂಗ್..

Publicspot

Banu Selection Reaction: ಬಾನು ಆಯ್ಕೆ ಬಗ್ಗೆ ಯಾರು ಏನಂದ್ರು..?

Publicspot

ನಾಳೆ, ನಾಡಿದ್ದು CET ಪರೀಕ್ಷೆ.. ಈ ವರ್ಷ ಮಹತ್ವದ ಬದಲಾವಣೆ..

Publicspot